ಹಾಸನ :ಸಮಾಜದ ಸಂಘರ್ಷಕ್ಕೆ ಎಡೆ ಮಾಡಿಕೊಡದಂತೆ ಚಿಂತನೆ ನಡೆಸಿ ಮೀಸಲಾತಿ ಕೊಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಇದನ್ನು ಅವರೇ ನಿಭಾಯಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಮೂಲ ಸೌಕರ್ಯಗಳನ್ನು ಪಡೆಯದೆ ಕೆಳಸ್ತರದಲ್ಲಿರುವ ಸಮುದಾಯಕ್ಕೆ ಮೀಸಲಾತಿ ಕೊಡಬೇಕು. ಈ ಮೂಲಕ ಅವರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢರನ್ನಾಗಿ ಮಾಡುವಂತಹ ಕಾರ್ಯ ಆಗಬೇಕು. ಆದರೆ, ಮಠಾಧೀಶರು ರಸ್ತೆಗಿಳಿದು ಪ್ರತಿಭಟನೆ ಮಾಡುವಂತಹ ಪರಿಸ್ಥಿತಿಗೆ ತಂದುಕೊಂಡಿದ್ದು ತಪ್ಪು ಎನ್ನುವುದು ನನ್ನ ಅಭಿಪ್ರಾಯ ಎಂದರು.