ಹಾಸನ :ಕೆಪಿಸಿಸಿ ಅಧ್ಯಕ್ಷ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಕುರಿತು ಲಘುವಾಗಿ ಮಾತನಾಡಿದರೆನ್ನಲಾದ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡುರಾವ್ ವಿರುದ್ಧ ಮಾಜಿ ಸಚಿವ ಹೆಚ್ ಡಿ ರೇವಣ್ಣ ಗರಂ ಆಗಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ನಾಯಕ ಬಂದಿರುವುದಾಗಿ ಕಾರ್ಯಕರ್ತರು ಪಕ್ಷ ಸಂಘಟಿಸಲು ಇಂತಹ ಸಮಾರಂಭ ಹಮ್ಮಿಕೊಳ್ಳುವುದರಲ್ಲಿ ಯಾವ ತಪ್ಪೂ ಇಲ್ಲ. ಆದರೆ, ಬಹಿರಂಗ ಭಾಷಣದಲ್ಲಿ ದಿನೇಶ್ ಗುಂಡೂರಾವ್ ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಿರುವುದು ಸರಿಯಲ್ಲ ಎಂದರು.