ಹಾಸನ: "ಸ್ಥಳೀಯ ಸಂಸ್ಥೆಗಳ ಮೀಸಲು ನಿಗದಿಯನ್ನು ಚುನಾವಣೆಗೂ ಮುನ್ನ ಮಾಡಬೇಕು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಚುನಾವಣೆ ನಡೆದು ಎರಡು ವರ್ಷವಾದರೂ ಅಧ್ಯಕ್ಷ ಚುನಾವಣೆ ಮಾಡಲಿಲ್ಲ" ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಬೆಳೆಯುತ್ತೆ ಎಂಬ ಭಯ ಇದೆ: ಎಚ್ಡಿ ರೇವಣ್ಣ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, "ಮೀಸಲು ನಿಗದಿಯಲ್ಲಿ ನ್ಯಾಯ ದೇವತೆಗೆ ಅನ್ಯಾಯ ಮಾಡಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಬೆಳೆಯುತ್ತದೆ ಎಂಬ ಭಯವಿದೆ. ಜಿಲ್ಲೆಯಲ್ಲಿ ಹಿಂದೆ ಕಾಂಗ್ರೆಸ್ ಮಾಡಿದ್ದನ್ನು ಈಗ ಬಿಜೆಪಿಯವರು ಮಾಡಿದ್ದಾರೆ" ಎಂದರು.
"ಹರಿಹರ ನಗರಸಭೆಗೆ ಮೀಸಲಾಗಿದ್ದ ಎಸ್ಟಿ ಮೀಸಲಾತಿಯನ್ನು ಹಾಸನ ನಗರಸಭೆಗೆ ಹಾಕಿದ್ದಾರೆ. ರಾಜ್ಯದಲ್ಲಿ ಎಸ್ಟಿಗೆ ಮೀಸಲು ಇರುವುದು ಎರಡೇ ಸ್ಥಾನ. ಅದು ಕೊಪ್ಪಳ ಮತ್ತು ಹರಿಹರಕ್ಕೆ ಮಾತ್ರ. ಜೆಡಿಎಸ್ ಬಹುಮತ ಇದೆ ಎಂದು ಬೇಕಂತಲೇ ಅಧಿಕಾರ ತಪ್ಪಿಸಿದ್ದು, ಇದಕ್ಕಾಗಿ 7 ತಿಂಗಳಿಂದ ಸರ್ಕಸ್ ಮಾಡಿದ್ದಾರೆ" ಎಂದು ಹೇಳಿದರು.
ಯಡಿಯೂರಪ್ಪರಿಗೆ ಸಾಮಾಜಿಕ ನ್ಯಾಯದ ಮೇಲೆ ನಂಬಿಕೆ ಇದೆಯೇ ಎಂದು ಪ್ರಶ್ನೆ ಮಾಡಿದ ಅವರು, ಇದರ ವಿರುದ್ಧ ಏನು ಮಾಡಬೇಕೆಂದು ಎಂದು ತೀರ್ಮಾನ ಮಾಡುತ್ತೇವೆ. ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ತಿಳಿಸಿದರು.