ಹಾಸನ:ಜಿಲ್ಲೆಯಲ್ಲಿ ಇಂದು ಹೊಸದಾಗಿ 87 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 25,120ಕ್ಕೆ ಏರಿಕೆಯಾಗಿದೆ. 1 ಸಾವಿನೊಂದಿಗೆ ಮೃತರ ಸಂಖ್ಯೆ 429 ತಲುಪಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿಂದು 87 ಕೋವಿಡ್ ಕೇಸ್ ಪತ್ತೆ: ಆರೋಗ್ಯಾಧಿಕಾರಿ ಸತೀಶ್ - Hassan Kovid News 2020
ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತಾ, ನೆಗಡಿ, ಕೆಮ್ಮು ಏನಾದರೂ ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು ಎಂದು ಆರೋಗ್ಯಾಧಿಕಾರಿ ಸತೀಶ್ ಮನವಿ ಮಾಡಿದ್ದಾರೆ.
ಜಿಲ್ಲಾ ಆರೋಗ್ಯಾಧಿಕಾರಿ ಸತೀಶ್
ನಗರದಲ್ಲಿ ಮಾತನಾಡಿದ ಅವರು, ಇಂದು ಬಿಡುಗಡೆಯಾದ 108 ಜನರು ಸೇರಿ ಈವರೆಗೆ 23,666 ಮಂದಿ ಗುಣಮುಖರಾಗಿದ್ದಾರೆ. 1025 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 34 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ತಾಲೂಕುವಾರು ಪ್ರಕರಣ: ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-2, ಅರಕಲಗೂಡು-9, ಅರಸೀಕೆರೆ-7, ಬೇಲೂರು-8, ಚನ್ನರಾಯಪಟ್ಟಣ-3, ಹಾಸನ-39, ಹೊಳೆನರಸೀಪುರ-16, ಸಕಲೇಶಪುರ-3 ಸೇರಿ ಒಟ್ಟು 87 ಪ್ರಕರಣ ಪತ್ತೆಯಾಗಿವೆ.