ಹಾಸನ:ಮಲೆನಾಡಿನಲ್ಲಿ ಮತ್ತೆ ಮಳೆರಾಯನ ಅಬ್ಬರ ಜೋರಾಗಿದ್ದು, ಗುರುವಾರದಿಂದ ಆರಂಭಗೊಂಡಿರುವ ಮಳೆ ಇಂದು ಕೂಡ ಮುಂದುವರೆದಿದೆ. ಹೇಮಾವತಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಿದ ಹಿನ್ನೆಲೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
ಮಲೆನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ: ಹೇಮಾವತಿ ಜಲಾಶಯದ ಒಳಹರಿವು ಹೆಚ್ಚಳ - hassan news
ಮಲೆನಾಡಿನಲ್ಲಿ ಮತ್ತೆ ಮಳೆರಾಯನ ಅಬ್ಬರ ಜೋರಾಗಿದ್ದು, ಗುರುವಾರದಿಂದ ಆರಂಭಗೊಂಡಿರುವ ಮಳೆ ಇಂದು ಕೂಡ ಮುಂದುವರೆದಿದೆ. ಹೇಮಾವತಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಿದ ಹಿನ್ನೆಲೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
ಹೇಮಾವತಿ ಜಲಾಶಯಕ್ಕೆ 24,232 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 23,950 ಕ್ಯೂಸೆಕ್ ನೀರನ್ನ ಹೊರ ಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 2922 ಅಡಿಯಾಗಿದ್ದು, ಪ್ರಸ್ತುತ ಜಲಾಶಯದಲ್ಲಿ 2921.62 ಅಡಿ ನೀರು ಸಂಗ್ರಹವಾಗಿದೆ. ಇನ್ನು, ಸಕಲೇಶಪುರ-ಆಲೂರು ಹಾಗೂ ಬೇಲೂರು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಮೂರು ದಿನಗಳಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹೇಮಾವತಿ ಜಲಾನಯನ ಪ್ರದೇಶವಾದ ಮೂಡಿಗೆರೆ ಭಾಗದಲ್ಲಿ ವರುಣನ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಅಲ್ಲಲ್ಲಿ ಗುಡ್ಡ ಕುಸಿತ ಪ್ರಕರಣ ಪುನರಾವರ್ತಿತವಾಗುತ್ತಿದ್ದು, ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ 72 ಗಂಟೆಗಳಲ್ಲಿ ಹಾಸನ, ಚಿಕ್ಕಮಗಳೂರು, ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.