ಕರ್ನಾಟಕ

karnataka

ETV Bharat / state

ನಗರಸಭೆ ಅಧ್ಯಕ್ಷ - ಉಪಾಧ್ಯಕ್ಷರ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ - ಶಾಸಕ ಶಿವಲಿಂಗೇಗೌಡ ಪ್ರತಿತಂತ್ರ

ಹಾಸನಕ್ಕಿಂತ ಅರಸೀಕೆರೆ ರಾಜಕೀಯ ರಂಗೇರುತ್ತಿದೆ. ಜೆಡಿಎಸ್ ಮಣಿಸಲು ಮುಖ್ಯಮಂತ್ರಿ ರಾಜಕೀಯದ ಆಪ್ತ ಕಾರ್ಯದರ್ಶಿ ಸಂತೋಷ್ ನಡೆಸಿದ ತಂತ್ರಕ್ಕೆ ಶಾಸಕ ಶಿವಲಿಂಗೇಗೌಡ ಪ್ರತಿತಂತ್ರ ಹೆಣೆದಿದ್ದಾರೆ.

high-court-interrupts-election-of-municipal-president-vice-president
ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ..

By

Published : Oct 15, 2020, 9:18 PM IST

ಅರಸೀಕೆರೆ: ಸ್ಥಾನ ಮೀಸಲಾತಿ ಸಂಬಂಧ ವಿವಾದಕ್ಕೆ ಒಳಗಾಗಿದ್ದ ಹಾಸನ ಮತ್ತು ಅರಸೀಕೆರೆ ನಗರಸಭೆಗಳ ಅಧ್ಯಕ್ಷ - ಉಪಾಧ್ಯಕ್ಷರ ಚುನಾವಣೆಯೂ ಸೇರಿದಂತೆ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಚುನಾವಣೆಗಳನ್ನು 2 ವಾರಗಳ ಕಾಲ ಮುಂದೂಡಿದೆ.

ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ..

ಹೌದು, ಇತಿಹಾಸದಲ್ಲಿ ಮೊಟ್ಟ ಮೊದಲನೆಯ ಬಾರಿ ಅರಸೀಕೆರೆ ನಗರಸಭೆ ಬಿಜೆಪಿ ಪಾಲಾಯ್ತು ಎನ್ನುವಷ್ಟರಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದ ಜೆಡಿಎಸ್​​ಗೆ ಹೈಕೋರ್ಟ್ ನ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಕ್ಟೋಬರ್ 8 ರಂದು ನಗರಸಭೆಯ ಮೀಸಲಾತಿ ಪಟ್ಟಿ ಪ್ರಕಟವಾಗಿದ್ದು, ಜೆಡಿಎಸ್ ಭದ್ರಕೋಟೆ ಯಾಗಿರುವ ಹಾಸನಕ್ಕೆ ಶಾಕ್ ನೀಡಿತ್ತು. 52ನೇ ಸ್ಥಾನದಲ್ಲಿರುವ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಕಟಿಸುವ ಮೂಲಕ ಇತರ ವರ್ಗಕ್ಕೆ ಅನ್ಯಾಯ ಮಾಡಿದೆ ಎಂದು ಜೆಡಿಎಸ್ ಮುಖಂಡರು ನ್ಯಾಯಾಲಯದ ಮೆಟ್ಟಲೇರಿದ್ದರು.

ಹಾಸನದ ಉಪ ವಿಭಾಗಾಧಿಕಾರಿ ಕಚೇರಿಯಿಂದ ಅ. 22 ರಂದು ಅರಸೀಕೆರೆಯ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವ ಸಂಬಂಧ ಉಪ ವಿಭಾಗಾಧಿಕಾರಿ ಶಾಸಕ ಶಿವಲಿಂಗೇಗೌಡರಿಗೆ ಪತ್ರದ ಮೂಲಕ ತಿಳಿಸಲಾಗಿತ್ತು. ಅಧಿಕಾರವನ್ನು ಹಿಡಿಯಲು ಬಿಜೆಪಿ ವಾಮ ಮಾರ್ಗವನ್ನ ಹಿಡಿದಿದ್ದು, ಇದರ ವಿರುದ್ಧ ನ್ಯಾಯಾಲಯಕ್ಕೆ ಮರು ಪರಿಶೀಲನಾ ಅರ್ಜಿಯನ್ನು ಸಲ್ಲಿಸಿತ್ತು. ಮೀಸಲಾತಿ ಪರಿಶೀಲನೆಗೆ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದ್ದು, ಧ್ಯಾನ್ ಚಿನ್ನಪ್ಪ, ಹಿರಿಯ ವಕೀಲ ಎಸ್ ಪೊನ್ನಣ್ಣ, ರಾಜ್ಯ ಚುನಾವಣಾ ಆಯೋಗದ ಹಿರಿಯ ವಕೀಲ ಫಣಿಂದ್ರ ಒಳಗೊಂಡ ಸಮಿತಿ ಹಾಸನ ಮತ್ತು ಅರಸೀಕೆರೆ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆಯಬೇಕಿದ್ದ ಚುನಾವಣೆಗೆ ತಾತ್ಕಾಲಿಕ ತಡೆ ನೀಡಿದೆ.

ಬೆಂಗಳೂರಿನ ನ್ಯಾಯಾಲಯದಲ್ಲಿ ನೀಡಿದ ತಡೆಯಿಂದ ಜೆಡಿಎಸ್ ಪಕ್ಷದ ಕಾರ್ಯಕರ್ತರು, ಅರಸೀಕೆರೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಇದರಿಂದ ಮೊದಲ ಬಾರಿಗೆ ನಗರಸಭೆಯ ಅಧ್ಯಕ್ಷಗಾದಿ ಹಿಡಿಯಲು ಹೊರಟಿದ್ದ ಬಿಜೆಪಿಗೆ ಮತ್ತೆ ನಿರಾಸೆಯುಂಟಾಗಿದೆ.

ಆದರೆ, ಜೆಡಿಎಸ್ ಮತ್ತು ಬಿಜೆಪಿಯ ದೊಂಬರಾಟದ ರಾಜಕೀಯದಿಂದ ಹಿಡಿಶಾಪ ಹಾಕುತ್ತಿದ್ದಾರೆ. ಯಾವಾಗ ಇವರಿಬ್ಬರ ಜಗಳ ಮುಗಿದು ಎರಡೂವರೆ ವರ್ಷಗಳಿಂದ ತಮ್ಮ ವಾರ್ಡ್ ಗಳ ಅಭಿವೃದ್ಧಿ ಕಾರ್ಯ ನಡೆಯದೇ ಸಮಸ್ಯೆಗಳು ಬೆಟ್ಟದಷ್ಟು ಬೆಳೆದಿದೆ. ಸಾಧ್ಯವಾದಷ್ಟು ನಗರಸಭೆಯ ಜಟಿಲ ಸಮಸ್ಯೆ ಬೇಗ ಮುಗಿದು ನನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮುಂದಾಗಲಿ ಎಂದು ಆಗ್ರಹ ಮಾಡುತ್ತಿದ್ದಾರೆ

ABOUT THE AUTHOR

...view details