ಬೆಂಗಳೂರು :ಹಾಸನದ ಚೌಡೇನಹಳ್ಳಿ ಬಳಿ ಮಂಗಗಳಿಗೆ ವಿಷ ಹಾಕಿ ಕೊಂದ ಪ್ರಕರಣದಲ್ಲಿ ತಪ್ಪಿಸ್ಥರ ವಿರುದ್ದ ಸೂಕ್ತ ಕ್ರಿಮಿನಲ್ ಕ್ರಮ ಜರುಗಿಸುವಲ್ಲಿ ಮೇಲ್ನೋಟಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಮಂಗಗಳ ಸಾವಿನ ಘಟನೆ ಬಗ್ಗೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಡಿಸಿಎಫ್ ಬಸವರಾಜ ಹಾಜರಾಗಿ, ಅಪರಾಧ ದಂಡ ಪ್ರಕ್ರಿಯಾ ಸಂಹಿತೆ 1976ರ ಸೆಕ್ಷನ್ 200ರ ಅಡಿ ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ತನಿಖೆ ಮುಂದುವರಿಸಲು ದೂರು ದಾಖಲಿಸಲಾಗಿತ್ತು. ಅವರ ಸಲಹೆ ಮೇರೆಗೆ ದೂರನ್ನು ಪರಿಷ್ಕರಿಸಲಾಗಿದೆ ಎಂದರು.