ಹಾಸನ:ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಗೋಹತ್ಯೆ ನಿಷೇಧ ಕಾನೂನನ್ನು ಮತ್ತೆ ಜಾರಿಗೊಳಿಸುವಂತೆ ಹಾಗೂ ಬಿಗ್ಬಾಸ್-13 ರಿಯಾಲಿಟಿ ಶೋ ರದ್ದುಗೊಳಿಸುವಂತೆ ಒತ್ತಾಯಿಸಿ, ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಗೋಹತ್ಯೆ ನಿಷೇಧಿಸಿ, ಬಿಗ್ಬಾಸ್-13 ರಿಯಾಲಿಟಿ ಶೋ ಬ್ಯಾನ್ ಗೆ ಒತ್ತಾಯ! - ಹಿಂದೂ ಜನಜಾಗೃತಿ ಸಮಿತಿ
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಗೋಹತ್ಯೆ ನಿಷೇಧ ಕಾನೂನನ್ನು ಮತ್ತೆ ಜಾರಿಗೊಳಿಸುವಂತೆ ಹಾಗೂ ಬಿಗ್ಬಾಸ್-13 ರಿಯಾಲಿಟಿ ಶೋ ರದ್ದುಗೊಳಿಸುವಂತೆ ಒತ್ತಾಯಿಸಿ, ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
2010ರಲ್ಲಿ ಆಗಿನ ಭಾರತೀಯ ಜನತಾ ಪಕ್ಷದ ಆಡಳಿತಾವಧಿಯಲ್ಲಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಗೋಹತ್ಯೆ ಕಾನೂನು ಜಾರಿಗೊಳಿಸಿತ್ತು. 2014ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ತಕ್ಷಣವೇ ಆ ಕಾನೂನನ್ನು ರದ್ದುಗೊಳಿಸಿತ್ತು. ಈಗ ಮತ್ತೆ ಭಾರತೀಯ ಜನತಾ ಪಕ್ಷವು ಅಧಿಕಾರದಲ್ಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದಲ್ಲಿ ಪುನಃ ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸಬೇಕು ಮತ್ತು ಗೋಮಾಂಸ ಮಾರಾಟ ಮತ್ತು ಸಾಗಣೆ ಮೇಲೆ ಕಠಿಣ ನಿರ್ಬಂಧ ವಿಧಿಸಬೇಕು. ಗೋವುಗಳ ಕಳ್ಳ ಸಾಗಣೆ ಮಾಡುವವರನ್ನು ತಡೆಯುವ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಒದಗಿಸಬೇಕು. ಹಿಂದೂ ಕಾರ್ಯಕರ್ತರ ಮೇಲಾಗಿರುವ ಆಕ್ರಮಣಗಳಲ್ಲಿ ಸಂಬಂಧಿಸಿದ ಗೋವುಗಳ ಕಳ್ಳಸಾಗಣೆದಾರರ ಮೇಲೆ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಅಲ್ಲದೇ, ಅಶ್ಲೀಲತೆ ಮತ್ತು ಲವ್ ಜಿಹಾದ್ ಪ್ರೋತ್ಸಾಹಿಸುವ ಬಿಗ್ಬಾಸ್-13 ರಿಯಾಲಿಟಿ ಶೋ ನಿಷೇಧಿಸುವಂತೆ ಆಗ್ರಹಿಸಿದರು.