ಕರ್ನಾಟಕ

karnataka

ETV Bharat / state

ಗಂಡನ ಮನೆಯಲ್ಲಿ ಗೃಹಿಣಿ ಆತ್ಮಹತ್ಯೆ, ಕೊಲೆ ಶಂಕೆ : 2 ಕುಟುಂಬಗಳ ನಡುವೆ ಮಾರಾಮಾರಿ - ಎರಡು ಕುಟುಂಬಗಳ ನಡುವೆ ಮಾರಾಮಾರಿ

ಮಗಳ ಸಾವಿನಿಂದ ರೊಚ್ಚಿಗೆದ್ದ ರಂಜಿತಾ ಸಂಬಂಧಿಕರು ಅಕ್ಷಯ್ ಮನೆ ಮುಂದೆ ಗಲಾಟೆ ಮಾಡಿದ್ದಾರೆ. ಈ ವೇಳೆ ಎರಡು ಕುಟುಂಬಸ್ಥರ ನಡುವೆ ಭಾರಿ ಮಾರಾಮಾರಿ ನಡೆದಿದೆ. ಸ್ಥಳಕ್ಕೆ ಬಂದ ಪೊಲೀಸರು ಉದ್ರಿಕ್ತರನ್ನ ಚದುರಿಸಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ..

Hassan
ಹಾಸನ

By

Published : May 23, 2022, 1:37 PM IST

ಹಾಸನ :ಗಂಡನ ಮನೆಯಲ್ಲಿ ಗೃಹಿಣಿ ನೇಣುಬಿಗಿದು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದ ವಿದ್ಯಾನಗರದಲ್ಲಿ ನಡೆದಿದೆ. ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮದ ರಂಜಿತಾ(31) ಆತ್ಮಹತ್ಯೆಗೆ ಶರಣಾದವರು. ಪತಿ ಹಾಗೂ ಅತ್ತೆ-ಮಾವನ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮದ ರಂಜಿತಾಳನ್ನ ಹಾಸನದ ಅಕ್ಷಯ್ ಎಂಬಾತನೊಂದಿಗೆ ಮದುವೆ ಮಾಡಲಾಗಿತ್ತು. ಗಂಡನ ಮನೆಯವರು ರಂಜಿತಾಗೆ ಕಿರುಕುಳ ನೀಡುತ್ತಿದ್ದರು. ಗಂಡನ ಮನೆಯವರೇ ಕೊಲೆ ಮಾಡಿ ನಂತರ ಆತ್ಮಹತ್ಯೆ ಎಂದು ಬಿಂಬಿಸಲು ನೇಣು ಹಾಕಿದ್ದಾರೆ ಎಂದು ಗೃಹಿಣಿ ಪೋಷಕರು ಆರೋಪಿಸಿದ್ದಾರೆ.

ರಂಜಿತಾ ಆತ್ಮಹತ್ಯೆಗೆ ಶರಣಾದ ಗೃಹಿಣಿ

ಮಗಳ ಸಾವಿನಿಂದ ರೊಚ್ಚಿಗೆದ್ದ ರಂಜಿತಾ ಸಂಬಂಧಿಕರು ಅಕ್ಷಯ್ ಮನೆ ಮುಂದೆ ಗಲಾಟೆ ಮಾಡಿದ್ದಾರೆ. ಈ ವೇಳೆ ಎರಡು ಕುಟುಂಬಸ್ಥರ ನಡುವೆ ಭಾರಿ ಮಾರಾಮಾರಿ ನಡೆದಿದೆ. ಸ್ಥಳಕ್ಕೆ ಬಂದ ಪೊಲೀಸರು ಉದ್ರಿಕ್ತರನ್ನ ಚದುರಿಸಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ:ಬೈಕ್ ಸವಾರನ ಮೇಲೆ ಕಾರು ಹತ್ತಿಸಿದ ವೈದ್ಯೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ABOUT THE AUTHOR

...view details