ಹಾಸನ:ದೇಶದಲ್ಲಿಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿದ ಮೋದಿಯವರು ಉದ್ಯೋಗ ಕಡಿತ ಮಾಡಲು ಕಾರಣಕರ್ತರಾಗಿದ್ದಾರೆ. ಹೀಗಾಗಿ ಬಜೆಟ್ ಮೇಲೆ ನಂಬಿಕೆ ಇಲ್ಲ ಎಂದು ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದ್ದಾರೆ.
ನಗರದಲ್ಲಿ ಬಜೆಟ್ ಮಂಡನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ರೈಲ್ವೆ ಮೇಲ್ಸೇತುವೆ ಸೇರಿದಂತೆ ಸಾಕಷ್ಟು ಯೋಜನೆಗಳಿಗೆ ಕೇಂದ್ರ ಸರ್ಕಾರ ಜಿಲ್ಲೆಗೆ ಅನುದಾನ ನೀಡಿಲ್ಲ. ಹೀಗಾಗಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.