ಹಾಸನ: ಜನತಾ ಪರಿವಾರದಿಂದ ಬಂದವರೇ ಹೆಚ್ಚಿನ ಜನ ರಾಜ್ಯದಲ್ಲಿ ಮುಖ್ಯಮಂತ್ರಿಗಳಾಗಿರೋದು. ಹಿಂದಿನ ಎರಡು ವರ್ಷದ ಸರ್ಕಾರದಲ್ಲಿ ಸುಲಿಗೆ ನಡೆಯುತ್ತಿತ್ತು. ಅದರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ನೂತನ ಮುಖ್ಯಮಂತ್ರಿ ಹೇಳಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಚನ್ನರಾಯಪಟ್ಟಣದ ಉದಯಪುರದಲ್ಲಿ ಕೃಷಿ ಯಂತ್ರಧಾರೆ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುವ ಮುಖಂಡ ಮುಖ್ಯಮಂತ್ರಿ ಆಗಿರೋದು ಸಂತೋಷದ ವಿಚಾರ. ಅವರು ಭ್ರಷ್ಟಾಚಾರ ತಡೆಯುವುದೇ ನಮ್ಮ ಗುರಿ ಅಂದಿದ್ದಾರೆ. ಒಳ್ಳೆ ಕೆಲಸ ಮಾಡಿ ಜನರ ವಿಶ್ವಾಸ ಗಳಿಸಲಿ. ಹಾಸನ ಜಿಲ್ಲೆಯಲ್ಲಿನ ಕೆಲಸ ತಡೆ ಹಿಡಿದಿದ್ದಾಗಿ ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ. ಈಗ ಹೊಸ ಮುಖ್ಯಮಂತ್ರಿ ಬಂದಿದ್ದಾರೆ. ಅವರು ರೈತಪರ, ಒಳ್ಳೆಯ ಕೆಲಸ ಮಾಡಲಿ. ಆ ಭಗವಂತ ಅವರಿಗೆ ಒಳ್ಳೆಯದು ಮಾಡಲಿ ಎಂದರು.