ಹಾಸನ : ಕಸಾಯಿಖಾನೆಗೆ ಸಾಗಿಸುತ್ತಿದ್ದ ಕರುಗಳನ್ನು ಸಂಘಟನೆಯೊಂದರ ಕಾರ್ಯಕರ್ತರು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ತಾಲೂಕಿನ ಬಂಡಿಹಳ್ಳಿ ತೋಟದ ಮನೆಯೊಂದರಲ್ಲಿ ಅಕ್ರಮವಾಗಿ ಖರೀದಿಸಿದ್ದ ಸುಮಾರು 120ಕ್ಕೂ ಅಧಿಕ ಎಳೆ ಕರುಗಳನ್ನು ಕಸಾಯಿಖಾನೆಗೆ ಸಾಗಿಸುವ ವೇಳೆ ಖಚಿತ ಮಾಹಿತಿ ಮೇರೆಗೆ ಸಂಘಟನೆ ಕಾರ್ಯಕರ್ತರು ಪೊಲೀಸರ ನೆರವಿನೊಂದಿಗೆ ರಕ್ಷಣೆ ಮಾಡಿದ್ದು, ಸದ್ಯ ಎಲ್ಲ ಕರುಗಳನ್ನು ಚನ್ನರಾಯಪಟ್ಟಣದ ಪೊಲೀಸ್ ಠಾಣೆಯ ಆವರಣಕ್ಕೆ ಸ್ಥಳಾಂತರ ಮಾಡಲಾಗಿದೆ.
ಇಂದು ವಾರದ ಸಂತೆಯಾಗಿದ್ದರಿಂದ ಉಪಯೋಗಕ್ಕೆ ಬಾರದ ಗಂಡು ಸೀಮೆ ಹಸುಗಳ ಕರುಗಳನ್ನು ಕೆಲವು ರೈತರು ಹಣದ ಆಸೆಗೆ ಬಿದ್ದು ಕಟುಕರಿಗೆ ಮಾರಾಟ ಮಾಡುತ್ತಿದ್ದಾರೆ. ಅಷ್ಟೆಲ್ಲ ಕೆಲವು ಸಂಘಟನೆಗಳ ಮುಖಂಡರುಗಳು ಕೂಡ ಇಂತಹ ಕೃತ್ಯಕ್ಕೆ ಸಾಥ್ ನೀಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.
ಕಸಾಯಿಖಾನೆಗೆ ಸಾಗಿಸುತ್ತಿದ್ದ 120 ಪುಟ್ಟ ಕರುಗಳನ್ನು ರಕ್ಷಿಸಿದ ಸಂಘಟನೆಯೊಂದರ ಕಾರ್ಯಕರ್ತರು ಕರುಗಳನ್ನು ಕರ್ನಾಟಕದಿಂದ ಕೇರಳಕ್ಕೆ ಸಾಗಿಸಲು ಮುಂದಾಗಿದ್ದ, ಸಂತಮ್ಮ ಕೃಪೆಯೆಂಬ ಟಾಟಾ ಏಸ್ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನು ಈ ಸಂಬಂಧ ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಕೂಡ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.