ಹಾಸನ : ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಮುಂದಾದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು ಮದ್ಯ ವಶಪಡಿಸಿಕೊಂಡಿದ್ದಾರೆ.
ಲಾಕ್ ಡೌನ್ ಮಧ್ಯೆ ಹಾಸನದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಮುಂದಾದದ ಭೂಪ - ಹಾಸನದಲ್ಲಿ ಲಾಕ್ ಡೌನ್ ಮಧ್ಯೆ ಅಕ್ರಮ ಮದ್ಯ ಮಾರಾಟ
ಲಾಕ್ ಡೌನ್ ಮಧ್ಯೆ ಹಾಸನದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಮುಂದಾದದವನನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು ಮದ್ಯದ ಪ್ಯಾಕೇಟ್ಗಳನ್ನು ವಶಪಡಿಸಿಕೊಂಡಿದ್ದಾರೆ.
![ಲಾಕ್ ಡೌನ್ ಮಧ್ಯೆ ಹಾಸನದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಮುಂದಾದದ ಭೂಪ Illegal liquor sales in Hassan](https://etvbharatimages.akamaized.net/etvbharat/prod-images/768-512-6628717-38-6628717-1585806055018.jpg)
ಅಕ್ರಮ ಮದ್ಯ ಮಾರಾಟಕ್ಕೆ ಮುಂದಾದದ ಭೂಪ
ತಾಲೂಕಿನ ತೆಂಕನಹಳ್ಳಿ ಗ್ರಾಮದ ದೊರೆ ಎಂಬಾತ ಮದ್ಯ ಮಾರಾಟ ಮಾಡಲು ಮುಂದಾಗಿದ್ದ. ಈ ವೇಳೆ ಆತನನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು ಮದ್ಯದ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಅಕ್ರಮ ಮದ್ಯ ಮಾರಾಟಕ್ಕೆ ಮುಂದಾದದ ಭೂಪ
ಊರಿನಲ್ಲಿ ಯಾರಾದರೂ ಮದ್ಯ ಮಾರಾಟ ಮಾಡಿದರೆ 500 ರೂ. ದಂಡ ವಿಧಿಸಲಾಗುವುದು ಎಂದು ಎರಡು ದಿನಗಳ ಹಿಂದೆಯೇ ಎಚ್ಚರಿಕೆ ನೀಡಲಾಗಿತ್ತು. ಆದರೆ, ಈತ ಮಾತ್ರ ರಾಜಾರೋಷವಾಗಿ ಮದ್ಯದ ಪೊಟ್ಟಣಗಳನ್ನು ಚೀಲದಲ್ಲಿ ಹಾಕಿಕೊಂಡು ಹೊರಟಿದ್ದ. ಕೆಲವರು ತಡೆದು ವಿಚಾರಿಸಿದಾಗ ಉಡಾಫೆಯ ಮಾತುಗಳನ್ನಾಡಿದ್ದ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಮದ್ಯದ ಟೆಟ್ರಾ ಪ್ಯಾಕೆಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
Last Updated : Apr 2, 2020, 2:40 PM IST