ಹಾಸನ :ಕೋವಿಡ್ ಭೀತಿ ಹಿನ್ನೆಲೆ ಈ ಬಾರಿ ಹಾಸನನಾಂಬ ದೇವಿ ದರ್ಶನ ಮಾಡಲು ಸಾರ್ವಜನಿಕರಿಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬ ದೇವಾಲಯ ಈ ವರ್ಷ ನವೆಂಬರ್ 5 ರಿಂದ 16ರವರೆಗೆ ಬಾಗಿಲು ತೆರೆಯಲಿದೆ. ದೇವಾಲಯದ ಬಾಗಿಲು ತೆರೆಯುವ ಮೊದಲ ದಿನ ಮತ್ತು ಕೊನೆಯ ದಿನದಂದು ಆಹ್ವಾನಿತರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುವುದು.
ಉಳಿದಂತೆ ಹಾಸನಾಂಬ ದೇವರ ದರ್ಶನಕ್ಕೆ ಯಾರಿಗೂ ಅವಕಾಶವಿಲ್ಲ. ಸಾರ್ವಜನಿಕರಿಗಾಗಿ ದೇವರ ಪೂಜೆ ವೀಕ್ಷಿಸಲು ಹಾಸನ ನಗರದ 10 ಕಡೆ ಎಲ್‌ಇಡಿ ಪರದೆ ಅಳವಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ''hasanambalive2020'' ಎಂದು ಸರ್ಚ್ ಮಾಡುವ ಮೂಲಕ ಯೂಟ್ಯೂಬ್‌ನಿಂದ ಪೂಜೆಯ ನೇರ ಪ್ರಸಾರ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಪ್ರಸಾದದ ವ್ಯವಸ್ಥೆ ಕೂಡ ಇರುವುದಿಲ್ಲ.