ಕರ್ನಾಟಕ

karnataka

ETV Bharat / state

ಅರಸೀಕೆರೆಯಲ್ಲಿ ಪೊಲೀಸ್ ವಸತಿ ಗೃಹಗಳ ಉದ್ಘಾಟನೆ - ಅರಸೀಕೆರೆ ಸುದ್ದಿ

ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ನಿರ್ಮಿಸಲಾಗಿರುವ ಪೊಲೀಸ್ ವಸತಿ ಗೃಹಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಉದ್ಘಾಟಿಸಿದ್ದಾರೆ.

Inauguration of Police quarters at Arsikere
ಪೊಲೀಸ್ ವಸತಿಗೃಹ

By

Published : Aug 18, 2020, 5:00 PM IST

ಅರಸೀಕೆರೆ(ಹಾಸನ): ಪೊಲೀಸ್ ಇಲಾಖೆಯ ಸಿಬ್ಬಂದಿಗಾಗಿ ಅರಸೀಕೆರೆಯಲ್ಲಿ ನಿರ್ಮಿಸಿರುವ ವಸತಿ ಗೃಹಗಳು ಉತ್ತಮ ರೀತಿಯಲ್ಲಿ ನಿರ್ಮಾಣಗೊಂಡಿದ್ದು, ಅಗತ್ಯ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಪೊಲೀಸ್ ಇಲಾಖೆಯ ಸಿಬ್ಬಂದಿಗಾಗಿ ನಿರ್ಮಿಸಲಾಗಿರುವ ನೂತನ ವಸತಿ ಗೃಹಗಳ ಉದ್ಘಾಟನಾ ಸಮಾರಂಭ ನೆರವೇರಿಸಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಕುಟುಂಬ ವಾಸಿಸಲು ಅಗತ್ಯವಿರುವ ಎಲ್ಲಾ ರೀತಿಯ ಸೌಕರ್ಯಗಳನ್ನು ವಸತಿ ಗೃಹಗಳಲ್ಲಿ ಉತ್ತಮವಾಗಿ ಕಲ್ಪಿಸಲಾಗಿದೆ. ವಸತಿ ಗೃಹಗಳಲ್ಲಿ ವಾಸಿಸುವ ಎಲ್ಲಾ ಪೊಲೀಸ್ ಇಲಾಖೆ ಸಿಬ್ಬಂದಿ ಇದು ತಮ್ಮ ಮನೆಗಳೆಂದು ಭಾವಿಸಿ ಇರುವಷ್ಟು ದಿನ ಉತ್ತಮವಾಗಿ ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.

ಪೊಲೀಸ್ ವಸತಿ ಗೃಹಗಳ ಉದ್ಘಾಟನೆ

ತಾಲೂಕಿನಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಆಗಬೇಕಿವೆ. ಅದರ ಜೊತೆಗೆ ಎತ್ತಿನಹೊಳೆ ಯೋಜನೆಯಲ್ಲಿ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ನೀರಾವರಿ ಸಚಿವರೊಡನೆ ಚರ್ಚಿಸಿ ಸರ್ಕಾರದ ಗಮನಕ್ಕೆ ತರಲಾಗುವುದು. ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸೋಂಕು ಹರಡುವುದನ್ನು ನಿಯಂತ್ರಿಸಲು ಟೆಸ್ಟ್‌ಗಳನ್ನು ಹೆಚ್ಚಾಗಿ ಮಾಡಲು ಈಗಾಗಲೇ ಸೂಚಿಸಲಾಗಿದೆ ಎಂದು ತಿಳಿಸಿದರು.

ABOUT THE AUTHOR

...view details