ಕರ್ನಾಟಕ

karnataka

ETV Bharat / state

ಹಾಸನದಲ್ಲಿ ಸ್ವಾತಂತ್ರ್ಯ ದಿನ: ಸಂಸದ ಪ್ರಜ್ವಲ್​​ ರೇವಣ್ಣ ಗೈರು... - ಜಿಲ್ಲಾಧಿಕಾರಿ ಅಕ್ರಂಪಾಷ

ದೇಶವನ್ನು ಬ್ರಿಟಿಷರ ಗುಲಾಮಗಿರಿಯ ಸಂಕೋಲೆಯಿಂದ ಬಂಧಮುಕ್ತಗೊಳಿಸಿ ಭಾರತೀಯರೆಲ್ಲ ಸ್ವತಂತ್ರರಾದ ದಿನದ ಸವಿನೆನಪಿಗಾಗಿ ಆಚರಿಸುವ ಸ್ವಾತಂತ್ರ್ಯ ದಿನಾಚರಣೆಯನ್ನು ಬುಧವಾರ ಜಿಲ್ಲೆಯಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

independence day: MP prajwal revanna absent

By

Published : Aug 15, 2019, 2:29 PM IST

ಹಾಸನ:ಸ್ವಾತಂತ್ರ್ಯ ದಿನವನ್ನ ಬುಧವಾರ ಜಿಲ್ಲೆಯಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 73ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷಾ ಧ್ವಜಾರೋಹಣ ನೆರವೇರಿಸಿದರು. ಆದರೆ, ಹಾಸನದ ಸಂಸದ ಪ್ರಜ್ವಲ್​​ ರೇವಣ್ಣ ಅವರು ಈ ಅಭೂತಪೂರ್ವ ಕಾರ್ಯಕ್ರಮಕ್ಕೆ ಗೈರಾಗಿದ್ದರು.

ಹಾಸನದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆ

ಸ್ಕೌಟ್ಸ್ & ಗೈಡ್ಸ್, ಎನ್‌ಸಿಸಿ, ಸೇವಾದಳ, ಪೊಲೀಸ್ ದೃಷ್ಟಿ ವಿಕಲಚೇತರನ್ನು ಒಳಗೊಂಡ 40 ತಂಡಗಳಿಂದ ಜಿಲ್ಲಾಧಿಕಾರಿ ಗೌರವ ವಂದನೆ ಸ್ವೀಕರಿಸಿದರು. ವಿವಿಧ ಶಾಲಾ ಮಕ್ಕಳು ದೇಶಾಭಿಮಾನ ಸಾರುವ ಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಶಾಸಕ ಪ್ರೀತಂಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸ್ವರೂಪ್ ಇದರು.

ABOUT THE AUTHOR

...view details