ಅರಕಲಗೂಡು:ತಂಬಾಕು ಬೆಳೆಗಾರರಿಗೆ ಆಗುತ್ತಿರುವ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಹೋರಾತ್ರಿ ಧರಣಿಯನ್ನು ಹಮ್ಮಿಕೊಳ್ಳಲಾಗುವುದು ಎಂದು ತಾಲೂಕು ರೈತ ಸಂಘ ಘಟಕದ ಅಧ್ಯಕ್ಷ ಸೀಬಳ್ಳಿ ಯೋಗಣ್ಣ ತಿಳಿಸಿದರು.
ತಂಬಾಕು ಬೆಳೆಗಾರರ ಬೇಡಿಕೆ ಈಡೇರಿಸುವಂತೆ ಒತ್ತಾಯ: ಅಹೋರಾತ್ರಿ ಧರಣಿ ಎಚ್ಚರಿಕೆ - ರಾಮನಾಥಪುರದ ತಂಬಾಕು ಹರಾಜು ಮಾರುಕಟ್ಟೆ
ನೆರೆಯ ಆಂಧ್ರಪ್ರದೇಶ ಸರ್ಕಾರವು ರೈತರು ಬೆಳೆದಿರುವ ಕಡಿಮೆ ಗುಣಮಟ್ಟದ ಹೊಗೆಸೊಪ್ಪನ್ನು ತನ್ನ ಹಣದಿಂದ ಕೊಂಡು ರೈತರಿಗೆ ಹೆಚ್ಚಿನ ಬೆಲೆ ಸಿಗುವಂತೆ ಮಾಡಿದೆ. ರಾಜ್ಯ ಸರ್ಕಾರವು ಅದೇ ರೀತಿ ರೈತರ ನೆರವಿಗೆ ನಿಲ್ಲಬೇಕು ಎಂದು ಆಗ್ರಹಿಸಿದರು.
ರಾಮನಾಥಪುರದ ತಂಬಾಕು ಹರಾಜು ಮಾರುಕಟ್ಟೆ ಆವರಣದಲ್ಲಿ, ತಂಬಾಕು ಬೆಳೆಗಾರರ ಬೇಡಿಕೆಗಳನ್ನು ಕುರಿತು ಮಾತನಾಡಿದರು. ನೆರೆಯ ಆಂಧ್ರಪ್ರದೇಶ ಸರ್ಕಾರವು ರೈತರು ಬೆಳೆದಿರುವ ಕಡಿಮೆ ಗುಣಮಟ್ಟದ ಹೊಗೆಸೊಪ್ಪನ್ನು ತನ್ನ ಹಣದಿಂದ ಕೊಂಡು ರೈತರಿಗೆ ಹೆಚ್ಚಿನ ಬೆಲೆ ಸಿಗುವಂತೆ ಮಾಡಿದೆ. ರಾಜ್ಯ ಸರ್ಕಾರವು ಅದೇ ರೀತಿ ರೈತರ ನೆರವಿಗೆ ನಿಲ್ಲಬೇಕು. ತಂಬಾಕು ಮಂಡಳಿ ಮಧ್ಯೆ ಪ್ರವೇಶಿಸಿ ಉತ್ತಮ ದರ್ಜೆಯ ಹೊಗೆಸೊಪ್ಪಿನ ಜೊತೆ ಜೊತೆಗೆ ಕಡಿಮೆ ದರ್ಜೆಯ ಸೊಪ್ಪು ಕೊಂಡು ಉತ್ತಮ ಬೆಲೆ ದೊರಕುವಂತೆ ಮಾಡಬೇಕು ಎಂದು ಆಗ್ರಹಿಸಿದರು.
ಫ್ಲಾಟ್ ಫಾರಂ 07ರ ಬೆಳೆಗಾರರ ಸಂಘದ ಅಧ್ಯಕ್ಷ ನಿಲುವಾಗಿಲು ಈರಣ್ಣ ಮತ್ತು 63ರ ಬೆಳೆಗಾರರ ಸಂಘದ ಅಧ್ಯಕ್ಷ ಕಾಡನೂರು ಕುಮಾರ್ ಮಾತನಾಡಿ, ತಂಬಾಕು ಬೆಳೆಗಾರರ ಹಿತ ಕಾಪಾಡಲು ಸಂಘವು ಆಹೋರಾತ್ರಿ ಧರಣಿಗೆ ಸಹಕಾರ ನೀಡಲಿದೆ. ಸಾವಿರಾರು ತಂಬಾಕು ಬೆಳೆಗಾರರಿಗೆ ವಿಧಿಸುತ್ತಿರುವ ಜಿಎಸ್ಟಿ ಮತ್ತು ದಂಡವನ್ನು ಹಿಂತೆಗೆದುಕೊಳ್ಳಬೇಕು. ಕೋವಿಡ್ ಪರಿಸ್ಥಿತಿಯಲ್ಲಿ ಬೆಳೆಗಾರರನ್ನು ಶೋಷಿಸುತ್ತಿರುವುದು ಖಂಡನೀಯವಾಗಿದ್ದು, ಆಹೋರಾತ್ರಿ ಧರಣಿ ಬೆಂಬಲಿಸುವುದಾಗಿ ತಿಳಿಸಿದರು.