ಹಾಸನ :ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಬಾಣಾವರ ಅಶೋಕ್‌ಗೆ ಟಿಕೆಟ್ ಕೈ ತಪ್ಪಿದ್ದು, ಅಶೋಕ್ ಬೆಂಬಲಿಗರು ಜೆಡಿಎಸ್ ಮುಖಂಡರ ಫೋಟೋ ಇರುವ ಫ್ಲೆಕ್ಸ್ಗಳನ್ನು ಹರಿದುಹಾಕಿರುವ ಘಟನೆ ನಡೆದಿದೆ. ಇದೇ ವೇಳೆ ಜೆಡಿಎಸ್ ಕಾರ್ಯಕರ್ತರು ಅರಸೀಕೆರೆ ಕ್ಷೇತ್ರದಿಂದ ಅಶೋಕ್‌ಗೆ ಟಿಕೆಟ್ ಘೋಷಣೆ ಮಾಡುವಂತೆ ಒತ್ತಾಯಿಸಿದರು.
ಈ ಹಿಂದೆ ಅರಸೀಕೆರೆ ಕ್ಷೇತ್ರದಿಂದ ಬಾಣಾವರ ಅಶೋಕ್‌ಗೆ ಟಿಕೆಟ್ ನೀಡುವಂತೆ ಒತ್ತಾಯ ಕೇಳಿಬಂದಿತ್ತು. ಈ ಸಂಬಂಧ ಕುಮಾರಸ್ವಾಮಿಯವರು ಅಶೋಕ್ ಅವರನ್ನು ಅರಸೀಕೆರೆ ಅಭ್ಯರ್ಥಿಯೆಂದು ಘೋಷಣೆ ಮಾಡಿದ್ದು, ಅದರಂತೆ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಆದರೆ ಬದಲಾದ ರಾಜಕೀಯ ವಿದ್ಯಮಾನದಲ್ಲಿ ಎನ್.ಆರ್.ಸಂತೋಷ್ ಅವರು ದೇವೇಗೌಡರನ್ನು ಭೇಟಿ ಮಾಡಿ ಪಕ್ಷದ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.