ಹಾಸನ :ವಿಧಾನಸಭಾ ಅಧಿವೇಶನದ ಸಂದರ್ಭದಲ್ಲಿ ಮಾಧ್ಯಮಗಳಿಗೆ ನಿಷೇಧ ಹೇರಿರುವುದು ಖಂಡನೀಯ ಎಂದು ರಾಜ್ಯ ಜೆಡಿಎಸ್ ಅಧ್ಯಕ್ಷ ಹಾಗೂ ಶಾಸಕ ಹೆಚ್ ಕೆ ಕುಮಾರಸ್ವಾಮಿ ಹೇಳಿದ್ದಾರೆ.
ವಿಧಾನಸಭಾ ಅಧಿವೇಶನಕ್ಕೆ ಮಾಧ್ಯಮಗಳ ನಿಷೇಧ ಖಂಡನೀಯ.. ಹೆಚ್ ಕೆ ಕುಮಾರಸ್ವಾಮಿ - ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ ಸುದ್ದಿ
ಸರ್ಕಾರ ಕೂಡಲೇ ಮಾಧ್ಯಮಗಳ ಮೇಲೆ ಹೇರಿರುವ ನಿಷೇಧವನ್ನು ತಕ್ಷಣ ಹಿಂಪಡೆಯಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಹೆಚ್.ಕೆ ಕುಮಾರಸ್ವಾಮಿ
ಸಕಲೇಶಪುರ ಪಟ್ಟಣದಲ್ಲಿ ಮಾತನಾಡಿದ ಅವರು, ಸರ್ಕಾರ ಯಾವ ಕಾರಣಕ್ಕಾಗಿ ದೃಶ್ಯ ಮಾಧ್ಯಮವನ್ನು ವಿಧಾನಸಭಾ ಆವರಣದೊಳಗೆ ನಿಷೇಧ ಹೇರಿದೆ ಎಂದು ಗೊತ್ತಾಗುತ್ತಿಲ್ಲ. ಸರ್ಕಾರದ ನ್ಯೂನ್ಯತೆಗಳನ್ನು ರಾಜ್ಯದ ಜನರ ಮುಂದೆ ಇಡುವುದು ಪ್ರತಿಯೊಬ್ಬ ಜನಪ್ರತಿನಿಧಿಯ ಕರ್ತವ್ಯ. ಈ ಕೆಲಸವನ್ನು ಮಾಧ್ಯಮಗಳು ರಾಜ್ಯದ ಮೂಲೆ ಮೂಲೆಗೂ ತಲುಪಿಸುತ್ತಿದ್ದು, ಸರ್ಕಾರ ಕೂಡಲೇ ಮಾಧ್ಯಮಗಳ ಮೇಲೆ ಹೇರಿರುವ ನಿಷೇಧವನ್ನು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.