ಹಾಸನ: ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಯಾಗಿರುವುದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರು ಕಡಲೆಕಾಯಿ ತಿನ್ನುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಅಚ್ಚೇದಿನ್ ಬರುತ್ತದೆ ಅಂತ ಹೇಳಿದ್ರು. ಆದರೆ ರೈತರ ಬದುಕು ಪ್ರತಿನಿತ್ಯ ದುಸ್ತರವಾಗುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಹೆಚ್ಚು ತೆರಿಗೆ ಹಾಕಿರುವುದರಿಂದ ಜನಸಾಮಾನ್ಯರಿಗೆ ಹೊರೆ ಬೀಳುತ್ತಿದೆ. ಈ ನಿಟ್ಟಿನಲ್ಲಿ ಸಾರಿಗೆ ಮತ್ತು ಸರಕು ವೆಚ್ಚಗಳನ್ನು ಹಾಗೂ ಪೆಟ್ರೋಲಿಯಂ ದರಗಳನ್ನು ಇಳಿಕೆ ಮಾಡಿದರೆ ಜನಸಾಮಾನ್ಯರಿಗೆ ಅನುಕೂಲವಾಗುತ್ತದೆ ಎಂದರು.