ಕರ್ನಾಟಕ

karnataka

ETV Bharat / state

ಸಮಾನ ವೇತನ, ಸೇವಾ ಭದ್ರತೆ ಒದಗಿಸಿ ; ಕಿರಿಯ ಆರೋಗ್ಯ ಸಹಾಯಕಿಯರಿಂದ ಉಸ್ತುವಾರಿ ಸಚಿವರಿಗೆ ಮನವಿ

ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವವರಿಗಿಂತ ಕಡಿಮೆ ವೇತನ ನೀಡಲಾಗುತ್ತಿದೆ. 1,200 ರೂ. ಪಿಎಫ್‌ ಕಳೆದು, 8,800 ರೂ. ದೊರೆಯುತ್ತಿದೆ. ಈ ಹಣದಿಂದ ಸಂಸಾರ ನಿರ್ವಹಣೆ ಕಷ್ಟವಾಗಿದೆ ಎಂದು ಸಚಿವರ ಬಳಿ ಅಳಲು ತೋಡಿಕೊಂಡರು..

Junior nurses
ಕಿರಿಯ ಆರೋಗ್ಯ ಸಹಾಯಕಿ

By

Published : Jul 28, 2020, 3:52 PM IST

ಹಾಸನ :ವಿವಿಧ ಬೇಡಿಕೆ ಈಡೇರಿಕೆ ಸೇರಿದಂತೆ ಕೆಲಸ ಖಾಯಂಗೊಳಿಸುವಂತೆ ಆಗ್ರಹಿಸಿ ಕಿರಿಯ ಆರೋಗ್ಯ ಸಹಾಯಕಿಯರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರಿಗೆ ಮನವಿ ಸಲ್ಲಿಸಿದರು.

ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ ಕಿರಿಯ ಆರೋಗ್ಯ ಸಹಾಯಕಿಯರು

56 ಕಿರಿಯ ಆರೋಗ್ಯ ಸಹಾಯಕಿಯರು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಲಾಖೆ ವಹಿಸಿರುವ ಎಲ್ಲ ಕಾರ್ಯಗಳನ್ನು ಮಾಡುತ್ತಿದ್ದಾರೆ. ರಜೆ ಪಡೆಯದೆ ಕಳೆದ ಐದು ತಿಂಗಳಿನಿಂದ ಕೋವಿಡ್‌ ಕಾರ್ಯ ಮಾಡುತ್ತಿದ್ದಾರೆ. ಕಂಟೇನ್‌ಮೆಂಟ್‌ ವಲಯ ಸೇರಿ ಇತರ ಕೆಲಸಗಳನ್ನು ಮಾಡುತ್ತಿದ್ದೇವೆ. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ, ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

ಕುಟುಂಬದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ಕೋವಿಡ್‌ ಕರ್ತವ್ಯದಲ್ಲಿ ತೊಡಗಿದ್ದಾಗ ಯಾವುದೇ ರೀತಿಯ ವಿಶೇಷ ಸೌಲಭ್ಯಗಳು ದೊರೆತಿಲ್ಲ. ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವವರಿಗಿಂತ ಕಡಿಮೆ ವೇತನ ನೀಡಲಾಗುತ್ತಿದೆ. 1,200 ರೂ. ಪಿಎಫ್‌ ಕಳೆದು, 8,800 ರೂ. ದೊರೆಯುತ್ತಿದೆ. ಈ ಹಣದಿಂದ ಸಂಸಾರ ನಿರ್ವಹಣೆ ಕಷ್ಟವಾಗಿದೆ ಎಂದು ಸಚಿವರ ಬಳಿ ಅಳಲು ತೋಡಿಕೊಂಡರು.

ಗುತ್ತಿಗೆ ನೌಕರರಾಗಿದ್ದರೂ ಹೆಚ್ಚಿನ ಕಾರ್ಯ ನಿರ್ವಹಿಸುತ್ತಿದ್ದೇವೆ. ಆದರೆ, ಸರ್ಕಾರ ವೇತನದಲ್ಲಿ ತಾರತಮ್ಯ ಮಾಡುತ್ತಿದೆ. ಅಲ್ಲದೇ ಹಿರಿಯ ಸಹಾಯಕಿಯರ ಕರ್ತವ್ಯವನ್ನೂ ನಿರ್ವಹಿಸುತ್ತಿದ್ದೇವೆ. ಹಾಗಾಗಿ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಮಾಡಿದರು. ಇದರ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ABOUT THE AUTHOR

...view details