ಹಾಸನ : ಕುಮಾರಸ್ವಾಮಿ ಸಿಎಂ ಆಗಿದ್ದಾಗ ಇದ್ದಂತಹ ಪೊಲೀಸರೇ ಈಗಲೂ ರಾಜ್ಯದಲ್ಲಿ ಇರೋದು. ನಾವೇನೂ ಹೊಸದಾಗಿ ಯಾರನ್ನೂ ನೇಮಕ ಮಾಡಿಲ್ಲ ಎಂದು ಸಚಿವ ಈಶ್ವರಪ್ಪ ಮಾಜಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಮಂಗಳೂರು ಬಾಂಬ್ ಪ್ರಕರಣದಲ್ಲಿ ಕಾಂಗ್ರೆಸ್, ಜೆಡಿಎಸ್ ಬಿಜೆಪಿ ಎನ್ನದೆ ಎಲ್ಲರೂ ಒಂದಾಗಬೇಕಿದೆ. ರಾಜ್ಯದಲ್ಲಿ ದುಷ್ಟ ಶಕ್ತಿಗಳು ಪೌರತ್ವ ಕಾಯ್ದೆ ದುರುಪಯೋಗ ಮಾಡಿಕೊಂಡು ಗಲಭೆ ನಿರ್ಮಾಣಕ್ಕೆ ಯತ್ನಿಸುತ್ತಿವೆ. ಎಲ್ಲರೂ ಒಂದಾಗದಿದ್ದರೆ ದುಷ್ಟ ಶಕ್ತಿಗಳಿಗೆ ಬೆಂಬಲ ಸಿಕ್ಕಂತಾಗುತ್ತದೆ. ಪೊಲೀಸರು ಜೀವ ಒತ್ತೆಯಿಟ್ಟು ವ್ಯವಸ್ಥಿತವಾಗಿ ದುಷ್ಕೃತ್ಯಗಳನ್ನ ಮಟ್ಟ ಹಾಕಲು ಮುಂದಾಗಿದ್ದಾರೆ. ಅದಕ್ಕಾಗಿ ಕುಮಾರಸ್ವಾಮಿ, ಸಿದ್ದರಾಮಯ್ಯರನ್ನ ಪ್ರಾರ್ಥನೆ ಮಾಡುತ್ತೇನೆ ಎಂದರು.