ಕರ್ನಾಟಕ

karnataka

ETV Bharat / state

ಹಾಸನ ಜಿಲ್ಲಾಸ್ಪತ್ರೆಯಲ್ಲಿ ಬಡವರಿಗೆ ಶುಲ್ಕದ ಹೊರೆ ಖಂಡಿಸಿ ಕರವೇ ಪ್ರತಿಭಟನೆ

ಜಿಲ್ಲಾಸ್ಪತ್ರೆಯಲ್ಲಿ ಬಡವರಿಗೆ ಹೊರೆಯಾಗುತ್ತಿರುವ ಶುಲ್ಕ ವಿಧಿಸುತ್ತಿರುವುದನ್ನು ಹಾಗೂ ಹಾಸನಾಂಬ ಜಾತ್ರಾ ಮಹೋತ್ಸವ ಸಮೀಪಿಸಿದರೂ ನಗರದ ರಸ್ತೆ ದುರಸ್ತಿ ವಿಳಂಬ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ‌ದರು.

ಕರವೇ ಪ್ರತಿಭಟನೆ

By

Published : Sep 28, 2019, 1:07 PM IST

ಹಾಸನ: ಜಿಲ್ಲಾಸ್ಪತ್ರೆಯಲ್ಲಿ ಬಡವರಿಗೆ ಹೊರೆಯಾಗುತ್ತಿರುವ ಶುಲ್ಕ ವಿಧಿಸುತ್ತಿರುವುದನ್ನು ಹಾಗೂ ಹಾಸನಾಂಬ ಜಾತ್ರಾ ಮಹೋತ್ಸವ ಸಮೀಪಿಸಿದರು ನಗರದ ರಸ್ತೆ ದುರಸ್ತಿ ವಿಳಂಬ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ‌ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಹಾಸನ ಜಿಲ್ಲಾಸ್ಪತ್ರೆಯಲ್ಲಿ ಬಡವರಿಗೆ ಶುಲ್ಕದ ಹೊರೆ ಖಂಡಿಸಿ ಕರವೇ ಪ್ರತಿಭಟನೆ

ಜಿಲ್ಲೆಯಲ್ಲಿ ಹೈಟೆಕ್ ಆಸ್ಪತ್ರೆ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆ ಆರಂಭವಾಗಿರುವುದು ಸಂತಸದ ವಿಚಾರ. ಇದರಿಂದ ಬಡ, ರೈತ, ಕಾರ್ಮಿಕ ವರ್ಗದ ಜನರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎಂದು ನಂಬಿದ್ದೆವು. ಆದರೆ ಇಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಬಹಳಷ್ಟು ಚಿಕಿತ್ಸೆಗಳಿಗೆ ಬಿಪಿಎಲ್ ಕಾರ್ಡ್​ದಾರರಿಗೆ ಶೇ.50 ರಷ್ಟು ಶುಲ್ಕ ವಿಧಿಸಲಾಗುತ್ತಿದೆ. ನಿರ್ವಹಣಾ ವೆಚ್ಚ ಭರಿಸುವ ನೆಪದಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ. ಇದರಿಂದ ಬಡ ಜನತೆಗೆ ನ್ಯಾಯವಾಗಿ ಸಿಗಬೇಕಾದ ಸರ್ಕಾರಿ ಸೌಲಭ್ಯಗಳನ್ನು ಕಸಿದುಕೊಂಡಂತಾಗಿದೆ, ಇದನ್ನು ಬಲವಾಗಿ ಖಂಡಿಸುತ್ತೇವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಅಲ್ಲದೇ ಹಾಸನದ ಆದಿದೇವತೆ ಹಾಸನಾಂಬ ಉತ್ಸವ ಮುಂದಿನ ತಿಂಗಳು ನಡೆಯಲಿದ್ದು, ನಗರದ ಬಹುತೇಕ ರಸ್ತೆಗಳು ಹದಗೆಟ್ಟಿವೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿ ರಸ್ತೆ ದುರಸ್ತಿ ಮಾಡಿಸಬೇಕು ಎಂದು ಒತ್ತಾಯಿಸಿದರು.

ABOUT THE AUTHOR

...view details