ಕರ್ನಾಟಕ

karnataka

ETV Bharat / state

ಕೈಗಾರಿಕಾಭಿವೃದ್ಧಿಗೆ ಹಾಸನಕ್ಕೆ ಹೆಚ್ಚಿನ ಪ್ರೋತ್ಸಾಹ ಬೇಕಿದೆ: ಕೆ.ಬಿ. ಅರಸಪ್ಪ

ಕೃಷಿ ಮತ್ತು ಪ್ರವಾಸೋದ್ಯಮ ವಿಷಯದಲ್ಲಿ ಹಾಸನ ಜಿಲ್ಲೆಯು ಅತ್ಯಂತ ಮಹತ್ವದ ಪಾತ್ರ ಹೊಂದಿದೆ. ಆದರೆ, ಅದನ್ನು ಸಮರ್ಪಕವಾಗಿ ಬಳಸಿಕೊಂಡಿಲ್ಲ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಕೆ.ಬಿ. ಅರಸಪ್ಪ ಹೇಳಿದ್ದಾರೆ.

President of Karnataka Small Industries Association President KB Arasappa
ಕೈಗಾರಿಕಾಭಿವೃದ್ಧಿ ವಿಷಯದಲ್ಲಿ ಹಾಸನಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ: ಕೆ.ಬಿ.ಅರಸಪ್ಪ

By

Published : Aug 26, 2020, 11:05 PM IST

ಹಾಸನ: ಕೈಗಾರಿಕಾಭಿವೃದ್ಧಿ ವಿಷಯದಲ್ಲಿ ಹಾಸನಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ. ಕೈಗಾರಿಕೆಗಳ ಅಭಿವೃದ್ಧಿಗೆ ಸಾಕಷ್ಟು ಭೂಮಿ ಹೊಂದಿರುವ ನಿರ್ದಿಷ್ಟ ಕೈಗಾರಿಕಾ ಸಮೂಹಗಳನ್ನು ಅಭಿವೃದ್ಧಿಪಡಿಸಲು ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘವು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಮೂಲ ಸೌಕರ್ಯಗಳನ್ನು ಸುಧಾರಿಸುವ ಅವಶ್ಯಕತೆಯಿದೆ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಕೆ.ಬಿ. ಅರಸಪ್ಪ ಹೇಳಿದ್ದಾರೆ.

ಕೈಗಾರಿಕಾಭಿವೃದ್ಧಿಗೆ ಹಾಸನಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ: ಕೆ.ಬಿ.ಅರಸಪ್ಪ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಮತ್ತು ಪ್ರವಾಸೋದ್ಯಮ ವಿಷಯದಲ್ಲಿ ಜಿಲ್ಲೆಯು ಅತ್ಯಂತ ಮಹತ್ವದ ಪಾತ್ರ ಹೊಂದಿದೆ. ಆದರೆ, ಸಮರ್ಪಕವಾಗಿ ಬಳಸಿಕೊಂಡಿಲ್ಲ. ಜಿಲ್ಲೆಯಲ್ಲಿನ 800 ಕೋಟಿ ರೂ. ಹೂಡಿಕೆ ಸೇರಿದಂತೆ ರಾಜ್ಯದಲ್ಲಿ 17,500ಕ್ಕೂ ಹೆಚ್ಚು ಎಂಎಸ್ಎಂಇ ಘಟಕಗಳು ಕಾರ್ಯಾಚರಣೆ ನಡೆಸುತ್ತಿದ್ದು, 97,000ಕ್ಕೂ ಅಧಿಕ ಜನರಿಗೆ ಉದ್ಯೋಗ ನೀಡುತ್ತಿದೆ. ಇತ್ತೀಚೆಗೆ ರಾಜ್ಯ ಸರ್ಕಾರವು ನೈರ್ಮಲ್ಯ ಉತ್ಪನ್ನಗಳ ಕ್ಲಸ್ಟರ್ ಅಭಿವೃದ್ಧಿಗಾಗಿ ಹಾಸನ ಜಿಲ್ಲೆಯನ್ನು ಗುರುತಿಸಿದೆ. ರಾಜ್ಯದ 9 ವಿವಿಧ ಕ್ಲಸ್ಟರ್‌ಗಳಲ್ಲಿ ಇದೂ ಒಂದಾಗಿದೆ ಎಂದು ಹೇಳಿದರು.

ಕೆಐಎಡಿಬಿ ಮತ್ತು ಕೆಎಸ್ಎಸ್ಐಡಿಸಿ ಹಲವಾರು ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಿವೆ. ಕೈಗಾರಿಕೆಗಳಿಗೆ ಅಗತ್ಯವಾದ ಮೂಲ ಸೌಕರ್ಯಗಳ ಬ್ಯಾಕಪ್ ಮತ್ತು ಲಾಜಿಸ್ಟಿಕ್ಸ್ ಅನ್ನು ಒದಗಿಸುವ ಮೂಲಕ ಜಿಲ್ಲೆಯಲ್ಲಿ ಹೂಡಿಕೆದಾರರಿಗೆ ಅಗತ್ಯ ಬೆಂಬಲ ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳುವ ಅಗತ್ಯವಿದೆ. ಹೊಸ ಕೈಗಾರಿಕಾ ನೀತಿಗೆ ಅನುಗುಣವಾಗಿ ಪಿಪಿಪಿ ಮಾದರಿಯಲ್ಲಿ ಇಂತಹ ವಸಾಹತುಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಸರ್ಕಾರ ಯೋಚಿಸಬಹುದು. ಇದರಿಂದಾಗಿ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಉತ್ತೇಜಿಸಲು ಕೈಗಾರಿಕಾ ಮೂಲ ಸೌಕರ್ಯಗಳನ್ನು ಒದಗಿಸಿದಂತಾಗುತ್ತದೆ ಎಂದರು.

ಕೈಗಾರಿಕೆಗಳಿಗೆ ಅನಗತ್ಯ ಕಿರುಕುಳವಾಗದಂತೆ ಸ್ಥಳೀಯ ಅಧಿಕಾರಿಗಳಿಂದ ವ್ಯವಸ್ಥಿತವಾಗಿ ತೆರಿಗೆ ಸಂಗ್ರಹ ಮಾಡುವ ಅವಶ್ಯಕತೆಯಿದೆ. ವಿದ್ಯುತ್ ಪೂರೈಕೆ ಅಡೆ-ತಡೆಗಳು ಸಾಮಾನ್ಯವಾಗಿ ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳ ಕಾರ್ಯಾಚರಣೆಗೆ ಸಮಸ್ಯೆ ಸೃಷ್ಟಿಸುವುದನ್ನು ಹೋಗಲಾಡಿಸುವ ಅವಶ್ಯಕತೆಯಿದೆ. ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಸರಕು-ಸಾಗಾಣಿಕೆಗೆ ಅವಕಾಶ ಕಲ್ಪಿಸುವ ಸಲುವಾಗಿ ಟ್ರಕ್ ಟರ್ಮಿನಲ್ ನಿರ್ಮಿಸುವ ಬೇಡಿಕೆಯಿದ್ದು, ಹೊಸ ಕೈಗಾರಿಕಾ ನೀತಿಯು ಹೂಡಿಕೆಗಳನ್ನು ಉತ್ತೇಜಿಸಲು ಹಲವಾರು ಪ್ರೋತ್ಸಾಹಗಳನ್ನು ಹೊಂದಿದೆ ಎಂದು ತಿಳಿಸಿದರು.

ABOUT THE AUTHOR

...view details