ಕರ್ನಾಟಕ

karnataka

ETV Bharat / state

ಕರ್ನಾಟಕ 3 ಭಾಗವಾಗುತ್ತದೆ, ರಾಜ್ಯದಲ್ಲಿ ಬೆರಕೆ ಸಂಸಾರ ಬರುತ್ತದೆ: ಬ್ರಹ್ಮಾಂಡ ಗುರೂಜಿ ಭವಿಷ್ಯ - Brahmanda Guruji prediction

ದೇವರ ಸತ್ಯವಾಗಿ ಹೇಳುತ್ತೇನೆ, 31 ವರ್ಷದೊಳಗೆ ಕರ್ನಾಟಕ ಮೂರು ಭಾಗ ಆಗಿ, ಮೂರು ಮುಖ್ಯಮಂತ್ರಿ, ಮೂವರು ರಾಜ್ಯಪಾಲರಾಗುತ್ತಾರೆ. ಇದು ಶಿವನ ಆಣೆಗೂ ಸತ್ಯ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ಭವಿಷ್ಯ ನುಡಿದಿದ್ದಾರೆ.

Brahmanda Guruji
ಬ್ರಹ್ಮಾಂಡ ಗುರೂಜಿ ಭಯಾನಕ ಭವಿಷ್ಯ

By

Published : Oct 14, 2022, 7:49 PM IST

ಹಾಸನ: ಈ ಬಾರಿ ಬೆರಕೆ ಸರ್ಕಾರ ಬರುವ ಜೊತೆಗೆ 31 ವರ್ಷದ ಒಳಗೆ ಕರ್ನಾಟಕ ಮೂರು ಭಾಗವಾಗಿ ವಿಭಜನೆಗೊಳ್ಳುತ್ತದೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ, ರಾಜ್ಯಪಾಲರು ಮೂರು ಮಂದಿ ಇರುತ್ತಾರೆ ಎಂದು ಹೇಳುವ ಮೂಲಕ ಬ್ರಹ್ಮಾಂಡ ಗುರೂಜಿ ಭಯಾನಕ ಭವಿಷ್ಯ ನುಡಿದಿದ್ದಾರೆ.

ಹಾಸನಾಂಬೆ ದೇವಿ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಬ್ರಹ್ಮಾಂಡ ಗುರೂಜಿ, ದೇಶದ ಬಗ್ಗೆ ಮಾತನಾಡಿದಾಗ ಟ್ರೋಲ್ ಮಾಡುತ್ತಾರೆ. ಪಾರ್ಲಿಮೆಂಟ್ ಏನು ಕಟ್ಟಿದ್ದಾರೆ, ಅದು ಭಾರೀ ಘೋರವಾಗಿರುತ್ತದೆ ಎನ್ನುವುದನ್ನು ವೀರ ಬ್ರಹ್ಮಸ್ವಾಮಿ ಚರಿತ್ರೆಯಲ್ಲಿ ಬರೆದಿದ್ದಾರೆ. ಯಾವುದೇ ಪಾರ್ಲಿಮೆಂಟ್ ಇರಲಿ ಅದು ಗುಂಡಾಗಿರಬೇಕು, ಚೌಕವಾಗಿರಬೇಕು, ಇಲ್ಲ ಚಂದ್ರ ಪೂರ್ತಿಯಾಗಿ ಕುಜನಾಂಶವಾಗಿರಬೇಕು. ತ್ರಿಕೋನ ಮಾಡಿದಾಗ ಉಗ್ರವಾಗಿರುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ

ಇನ್ಮೇಲೆ ದೇಶದ ಮೇಲೆ, ಜನರ ಮೇಲೆ ಒತ್ತಾಯ, ಒತ್ತಡಗಳು ಜಾಸ್ತಿ ಆಗುತ್ತವೆ. ಕಲಿಯುಗ ಅಂತ್ಯ ಕಾಲಕ್ಕೆ ರೋಗ ರುಜಿನಗಳು ಜಾಸ್ತಿ ಆಗುತ್ತವೆ. ಡಿಸೆಂಬರ್ ಅಂತ್ಯಕ್ಕೆ ಐದು ಗ್ರಹಗಳು ಒಟ್ಟಿಗೆ ಬರುತ್ತದೆ. ಒಂಬತ್ತು ತಿಂಗಳು ಕೂರುತ್ತವೆ. ಎರಡು ಗ್ರಹಣಗಳು ಹತ್ತಿರ ಬರಬಾರದು. ಜನರಿಗೆ ನೀರಿನ ಅಭಾವ, ಬೆಂಕಿ, ಗಲಾಟೆ, ಘರ್ಷಣೆ, ಸ್ವಂತದವರ ಹತ್ತಿರ ಘರ್ಷಣೆಗಳಾಗುತ್ತವೆ. ರಾಜ್ಯದಲ್ಲಿ ಯಾರೂ ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ:ಕೊಡಗಿನ ಸರ್ವನಾಶದ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ ವಿರುದ್ಧ ದೂರು

ಕರ್ನಾಟಕ ಭಾಗವಾಗುವುದು ಅಷ್ಟೇ ಅಲ್ಲ, ಭಾರತ ದೇಶವು ಇಬ್ಭಾಗವಾಗುತ್ತದೆ. ಇಬ್ಬರು ಪ್ರಧಾನಿಗಳು ಹಾಗೂ ಇಬ್ಬರು ರಾಷ್ಟ್ರಪತಿಗಳು ದೇಶವನ್ನು ಆಳುತ್ತಾರೆ. ಇದು ನಾನು ಹೇಳುತ್ತಿರುವುದಲ್ಲ. ಹೀಗೆ ಆಗಬೇಕು ಅಂತ ವೀರ ಬ್ರಮ್ಮಯ್ಯ, ಕೈವಾರ ತಾತಯ್ಯ, ಮಂಟೆ ಸ್ವಾಮಿಗಳು ಶಾಸನ ಬರೆದಿದ್ದಾರೆ. ಇದು ನಡೆಯುವುದು ಸತ್ಯ. ಈ ಭಾರಿ ಬೆರಕೆ ರಾಜಕೀಯ ಸಂಸಾರ ಗ್ಯಾರಂಟಿ. ಯಾರು ಮುಖ್ಯಮಂತ್ರಿ ಆಗುತ್ತಾರೆ ಅಂತ ಗೊಂದಲ ಹೆಚ್ಚಾಗುತ್ತದೆ ಎಂದರು.

ABOUT THE AUTHOR

...view details