ದೆಹಲಿಯಲ್ಲಿ ನಡೆಯುವ ಬೃಹತ್ ರ‍್ಯಾಲಿಯಲ್ಲಿ ರಾಜ್ಯದ ರೈತರು ಭಾಗಿ: ಕೋಡಿಹಳ್ಳಿ ಚಂದ್ರಶೇಖರ್ - ನ. 26 ಮತ್ತು 27 ರಂದು ದೆಹಲಿಯಲ್ಲಿ ರೈತರ ರ್ಯಾಲಿ ಲೇಟೆಸ್ಟ್ ಸುದ್ದಿ
ರೈತ ವಿರೋಧಿ ಎಪಿಎಂಸಿ ಹಾಗೂ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಜಾರಿ ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ನ. 26 ಮತ್ತು 27 ರಂದು ನಡೆಯುವ ಬೃಹತ್ ಪ್ರತಿಭಟನಾ ರ‍್ಯಾಲಿಯಲ್ಲಿ ರಾಜ್ಯದ ರೈತರು ಭಾಗವಹಿಸಲಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಮಾಹಿತಿ ನೀಡಿದ್ರು.
ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಟಿ
ಹಾಸನ: ರೈತ ವಿರೋಧಿ ಎಪಿಎಂಸಿ ಹಾಗೂ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಜಾರಿ ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ರಾಜ್ಯದ ರೈತರು ಭಾಗವಹಿಸಲಿದ್ದಾರೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.
ಪೆಟ್ರೋಲಿಯಂ, ರೈಲ್ವೆ, ವಿದ್ಯುತ್, ಜೀವ ವಿಮೆ ಸೇರಿದಂತೆ ಹಲವು ವಲಯಗಳನ್ನು ಕೇಂದ್ರ ಸರ್ಕಾರ ಖಾಸಗಿಯವರಿಗೆ ವಹಿಸಿದೆ. ಇದೀಗ ಕೃಷಿ ವಲಯದ ಮೇಲೂ ಕೂಡ ಇದೇ ರೀತಿ ಕ್ರಮ ಮುಂದುವರೆದರೆ ದೇಶದ ರೈತರು ಹಾಗೂ ಸಾರ್ವಜನಿಕ ವಲಯಕ್ಕೆ ದೊಡ್ಡ ಪೆಟ್ಟು ಬೀಳಲಿದೆ. ಆದ್ದರಿಂದ ಕಾಯ್ದೆ ಹಿಂಪಡೆಯಲು ಆಗ್ರಹಿಸಿದರು. ಪಂಜಾಬ್ ಮುಖ್ಯಮಂತ್ರಿ ರೈತ ವಿರೋಧಿಯಾದ ಯಾವುದೇ ಕಾಯ್ದೆಯನ್ನು ಕೇಂದ್ರ ಸರ್ಕಾರ ಹೇರಿದರೆ ಅದನ್ನು ನಮ್ಮ ರಾಜ್ಯದಲ್ಲಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಈಗಾಗಲೇ ಹೇಳಿಕೆ ನೀಡಿದ್ದಾರೆ. ಇದನ್ನು ಸಮರ್ಥಿಸಿಕೊಂಡಿರುವ ರಾಜಸ್ಥಾನ ಸರ್ಕಾರ ಕೂಡ ಆ ರಾಜ್ಯದಲ್ಲಿ ಕಾಯ್ದೆ ಜಾರಿಗೆ ಒಪ್ಪಿರುವುದಿಲ್ಲ. ಆದರೆ ಕರ್ನಾಟಕದಲ್ಲಿ ಕಾಯ್ದೆಯನ್ನು ಜಾರಿ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಹೇಳಿದರು.