ಹಾಸನ:ಜಮೀನು ವ್ಯಾಜದ ಹಿನ್ನೆಲೆ ಎರಡು ಸಮುದಾಯಗಳ ನಡುವೆ ಗಲಾಟೆ ಉಂಟಾಗಿ ಮನೆಗೆ ಬೆಂಕಿ ಹಚ್ಚಿದ ಘಟನೆ ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರು ಸಮೀಪದ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಂಗಸ್ವಾಮಿ ಮತ್ತು ರಮೇಶ್ ಇಬ್ಬರೂ ಒಂದೇ ಗ್ರಾಮದವರಾಗಿದ್ದು, ಜಮೀನಿನ ವಿಚಾರವಾಗಿ ಕಳೆದ ನಾಲ್ಕು ವರ್ಷಗಳಿಂದ ಇವರ ಮಧ್ಯೆ ವ್ಯಾಜ್ಯ ನಡೆಯುತ್ತಿತ್ತು. ಈ ಹಿನ್ನೆಲೆ ಮಂಗಳವಾರ ರಾತ್ರಿ ರಂಗಸ್ವಾಮಿ ಮತ್ತು ಆತನ ಸಹಚರರು ರಮೇಶ್ ಮನೆಗೆ ಪೆಟ್ರೋಲ್ ಸರಿದು ಬೆಂಕಿ ಹಾಕಿದ್ದಾರೆ ಎನ್ನಲಾಗ್ತಿದೆ. ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಪಟ್ಟರೂ, ಅಷ್ಟರೊಳಗೆ ಬೆಂಕಿಯ ಕೆನ್ನಾಲಿಗೆಯಿಂದ ಮನೆ ಸುಟ್ಟು ಕರಕಲಾಗಿದೆ. ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಾಗೂ ದವಸ ಧಾನ್ಯಗಳು ಸೇರಿ 50 ಲಕ್ಷಕ್ಕೂ ಅಧಿಕ ಮೌಲ್ಯದ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.