ಕರ್ನಾಟಕ

karnataka

ETV Bharat / state

ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ: ಬೆಳಗ್ಗೆ 4 ಗಂಟೆಯಿಂದಲೇ ಕ್ಯೂ - hasanamba temple news

ವರ್ಷಕೊಮ್ಮೆ ಮಾತ್ರ ಬಾಗಿಲು ತೆರೆದು ದರ್ಶನ ನೀಡುವ ಹಾಸನಾಂಬೆ ದೇವಿಯ ದರುಶನಕ್ಕೆ ರಾಜ್ಯದ ಮೂಲೆ-ಮೂಲೆಗಳಿಂದ ಜನಸಾಗರವೇ ಹರಿದು ಬರುತ್ತಿದೆ.

ಹಾಸನಾಂಬೆ ದರುಶನಕ್ಕೆ ಹರಿದು ಬಂದ ಜನಸಾಗರ

By

Published : Oct 23, 2019, 9:41 AM IST

ಹಾಸನ :ವರ್ಷಕೊಮ್ಮೆ ಮಾತ್ರ ಬಾಗಿಲು ತೆರೆದು ದರ್ಶನ ನೀಡುವ ಹಾಸನಾಂಬೆ ಭಕ್ತರ ಪಾಲಿಗೆ ಬೇಡಿದ್ದನ್ನು ಕರುಣಿಸುವ ಶಕ್ತಿದೇವತೆ. ಈ ದೇವಿಯ ದರುಶನಕ್ಕೆ ರಾಜ್ಯದ ಮೂಲೆ-ಮೂಲೆಗಳಿಂದ ಜನಸಾಗರವೇ ಹರಿದು ಬರುತ್ತಿದೆ. ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕಾಗಿ ಭಕ್ತರ ದಂಡೇ ಹರಿದು ಬರುತ್ತಿದೆ. ಪ್ರಾತ:ಕಾಲ ಜಾವ 4 ಗಂಟೆಯಿಂದಲೇ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.

ಹಾಸನಾಂಬೆ ದರುಶನಕ್ಕೆ ಹರಿದು ಬಂದ ಜನಸಾಗರ
ವರ್ಷದಲ್ಲಿ ಒಮ್ಮೆ ಬಾರಿ ಮಾತ್ರ ದರುಶನ ಭಾಗ್ಯ ಕಲ್ಪಿಸುವ ಹಾಸನಾಂಬೆ ದೇವಿ ದೇಗುಲಕ್ಕೆ ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು, ತುಮಕೂರು ಸೇರಿದಂತೆ ನಾನಾ ಭಾಗಗಳಿಂದ ಬರ್ತಿದ್ದಾರೆ. ಈ ಮೂಲಕ ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.ಅಕ್ಕಮಹಾದೇವಿ ಅಂಗಡಿ ಭಕ್ತರು ಇನ್ನು ದೇವಿಯ ದರ್ಶನಕ್ಕೆ ಗಣ್ಯಾತಿ ಗಣ್ಯರೂ ಆಗಮಿಸಿದ್ದರಿಂದ ದೇಗುಲದ ಆವರಣದಲ್ಲಿ ನೂಕುನುಗ್ಗಲು ಉಂಟಾಯಿತು. ಹಾಗಾಗಿ ಭಕ್ತರು ಸರತಿ ಸಾಲಿನಲ್ಲಿ ಕೆಲಕಾಲ ನಿಂತಲ್ಲೇ ನಿಂತು ಕೊಂಚ ತೊಂದರೆ ಅನುಭವಿಸಿದರು.ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ರಾತ್ರಿಗಿಂತ ಹಗಲಲ್ಲೇ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಅಲ್ಲದೇ ಮಧ್ಯಾಹ್ನ 1ರಿಂದ 3ರವರೆಗೆ ನೈವೇದ್ಯದ ಸಮಯದಲ್ಲಿ ದರ್ಶನಕ್ಕೆ ಅವಕಾಶ ಇಲ್ಲದ ಕಾರಣ ಜನಸಂದಣಿ ಹೆಚ್ಚಾಗುತ್ತಿದೆ.

ABOUT THE AUTHOR

...view details