ಅರಕಲಗೂಡು(ಹಾಸನ):ತಾಲೂಕು ಕಚೇರಿಯಲ್ಲಿ ಕರೆಯಲಾದ ತಾಲೂಕಿನ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಶಾಸಕ ಎ. ಟಿ. ರಾಮಸ್ವಾಮಿ ತಾಲೂಕಿನಲ್ಲಿ ಹೆಚ್ಚುತ್ತಿರುವ ಕೋವಿಡ್ -19 ರೋಗವನ್ನು ತಡೆಗಟ್ಟಲು ಲಾಕ್ಡೌನ್ ಅನಿವಾರ್ಯವಾಗಿದೆ ಎಂದು ಹೇಳಿದರು.
ಕೋವಿಡ್ ತಡೆಗಟ್ಟಲು ಲಾಕ್ಡೌನ್ ಅನಿವಾರ್ಯ: ಶಾಸಕ ಎ.ಟಿ. ರಾಮಸ್ವಾಮಿ - ಶಾಸಕ ಎ. ಟಿ. ರಾಮಸ್ವಾಮಿ
ಸಾರ್ವಜನಿಕರು ಮತ್ತು ವರ್ತಕರು ಸಹಕಾರ ನೀಡಿ ಜೊತೆಗೆ ಪ್ರಪಂಚಕ್ಕೆ ಮಾರಕವಾಗಿರುವ ಕೊರೊನಾ ವೈರಸ್ ರೋಗ ತಡೆಗಟ್ಟಲು ಸಹಕರಿಸಬೇಕು. ಲಾಕ್ಡೌನ್ ಸಮಯದಲ್ಲಿ ಸೋಮವಾರ, ಬುಧವಾರ, ಶುಕ್ರವಾರ ಜನಸಾಮಾನ್ಯರಿಗೆ ಅಗತ್ಯ ವಸ್ತುಗಳು ಲಭ್ಯವಿದ್ದು, ಸಾರ್ವಜನಿಕರು ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ನಡೆಸಬೇಕು ಎಂದು ಶಾಸಕ ಎ ಟಿ ರಾಮಸ್ವಾಮಿ ಹೇಳಿದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಅವಧಿಯಲ್ಲಿ ಸಾರ್ವಜನಿಕರು ಮತ್ತು ವರ್ತಕರು ಸಹಕಾರ ನೀಡಿ ಜೊತೆಗೆ ಪ್ರಪಂಚಕ್ಕೆ ಮಾರಕವಾಗಿರುವ ಕೊರೊನಾ ವೈರಸ್ ರೋಗ ತಡೆಗಟ್ಟಲು ಸಹಕರಿಸಬೇಕು. ಲಾಕ್ಡೌನ್ ಸಮಯದಲ್ಲಿ ಸೋಮವಾರ, ಬುಧವಾರ, ಶುಕ್ರವಾರ ಜನಸಾಮಾನ್ಯರಿಗೆ ಅಗತ್ಯ ವಸ್ತುಗಳು ಲಭ್ಯವಿದ್ದು, ಸಾರ್ವಜನಿಕರು ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ನಡೆಸಬೇಕು ಮತ್ತು ಉಳಿದ ದಿನಗಳಾದ ಮಂಗಳವಾರ, ಗುರುವಾರ, ಶನಿವಾರ, ಭಾನುವಾರ ಸಂಪೂರ್ಣ ಲಾಕ್ಡೌನ್ ಜಾರಿ ಇರುತ್ತದೆ ಎಂದು ತಿಳಿಸಿದರು.
ಲಾಕ್ಡೌನ್ ಸಮಯದಲ್ಲಿ ಸಾರ್ವಜನಿಕರ ಓಡಾಟವನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸಹಕಾರ ಅತ್ಯಗತ್ಯವೆಂದು ತಿಳಿಸಿದರು. ಸಭೆಯಲ್ಲಿ ತಾಲೂಕು ತಹಶೀಲ್ದಾರ್ ರೇಣುಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್, ಇನ್ಸ್ಪೆಕ್ಟರ್ ದೀಪಕ್, ತಾಲೂಕು ಆರೋಗ್ಯಾಧಿಕಾರಿ ಡಾ. ಸ್ವಾಮಿಗೌಡ, ಡಾ.ದೀಪಕ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಭಾಗೀರಥಿ ಸೇರಿದಂತೆ ಮತ್ತಿತರರು ಹಾಜರಿದ್ದರು.