ಹಾಸನ: ಲಾರಿ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 25 ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬಸವನಪುರ ಗೇಟ್ ಬಳಿ ನಡೆದಿದೆ.
ಲಾರಿ-ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿ... 25 ಕ್ಕೂ ಹೆಚ್ಚು ಮಂದಿಗೆ ಗಾಯ - ಕೆಎಸ್ಆರ್ಟಿಸಿ
ಯಲ್ಲಾಪುರದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಅರಸೀಕೆರೆ ತಾಲೂಕಿನ ಬಸವನಪುರ ಗೇಟ್ ಬಳಿ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿ, 25ಕ್ಕೆ ಹೆಚ್ಚಿನ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಲಾರಿ-ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿ
ಯಲ್ಲಾಪುರದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಅರಸೀಕೆರೆ ತಾಲೂಕಿನ ಬಸವನಪುರ ಗೇಟ್ ಬಳಿ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿವೆ. ಬಸ್ಸಿನಲ್ಲಿದ್ದ ಗಾಯಾಳುಗಳನ್ನು ಅರಸೀಕೆರೆ ಚಾಮರಾಜೇಂದ್ರ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
ಅಪಘಾತ ಸ್ಥಳಕ್ಕೆ ಗಂಡಸಿ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.