ಕರ್ನಾಟಕ

karnataka

ETV Bharat / state

ಬೈಕ್ ಗೆ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು - Hassan lorry bike accident

ಹಾಸನ ಜಿಲ್ಲೆಯ ಮೊಸಲೇಹೊಸಹಳ್ಳಿ ಬಳಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

Accident
Accident

By

Published : Aug 20, 2020, 6:25 PM IST

ಹಾಸನ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮೊಸಲೇಹೊಸಹಳ್ಳಿ ಬಳಿ ನಡೆದಿದೆ.

ಶಂಕರ್ (46) ಮೃತಪಟ್ಟ ಬೈಕ್ ಸವಾರನಾಗಿದ್ದು, ಹಾಸನ ತಾಲೂಕು ಕಿತ್ತಾನೆ ಗ್ರಾಮದ ವ್ಯಕ್ತಿ ಎಂದು ಗುರುತಿಸಲಾಗಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲಿ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾನೆ. ಇಇನ್ನು ಅಪಘಾತದಲ್ಲಿ ಬೈಕ್ ನುಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಮೃತದೇಹವನ್ನು ಹಾಸನದ ಸರ್ಕಾರಿ ಶವಾಗಾರಕ್ಕೆ ರವಾನಿಸಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ. ಇನ್ನು ಈ ಸಂಬಂಧ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details