ಕರ್ನಾಟಕ

karnataka

ETV Bharat / state

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿ ಗಂಭೀರ - ಚನ್ನರಾಯಪಟ್ಟಣ

ವೇಗವಾಗಿ ಬಂದ ಲಾರಿ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರನೊರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ತಡರಾತ್ರಿ ನಡೆದಿದೆ. ದ್ವಿಚಕ್ರವಾಹನದಲ್ಲಿದ್ದ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Lorry collides with two-wheelers; 1 died, two people seriously injured
ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿ ಗಂಭೀರ

By

Published : Jun 23, 2021, 4:02 AM IST

ಚನ್ನರಾಯಪಟ್ಟಣ (ಹಾಸನ): ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರನೊರ್ವ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ. ಚನ್ನರಾಯಪಟ್ಟಣ ನಗರದ ನಾಗಸಮುದ್ರ ಬಡಾವಣೆಯ ಹೇಮಂತ್ ಮೃತ ದುರ್ದೈವಿ. ಸಂಜು ಮತ್ತು ಕುಮಾರ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೆಲಸದ ನಿಮಿತ್ತ ಚನ್ನರಾಯಪಟ್ಟಣದಿಂದ ಹಿರೀಸಾವೆ ಸಮೀಪದ ಬಡಕನಹಳ್ಳಿಗೆ ಹೋಗಿದ್ದ ಮೂವರು, ದ್ವಿಚಕ್ರವಾಹನದಲ್ಲಿ ವಾಪಸ್‌ ಬರತ್ತಿದ್ದರು. ಮಲ್ಲವ್ವನ ಘಟ್ಟ ಸಮೀಪ ಎಡಭಾಗದ ರಸ್ತೆಯಿಂದ ಬಲಭಾಗಕ್ಕೆ ಯುಟರ್ನ್ ಪಡೆಯುವ ವೇಳೆ ಅತಿ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಘಟನೆ ಸಂಬಂಧ ಲಾರಿ ಚಾಲಕ ಮತ್ತು ಲಾರಿಯನ್ನು ವಶಕ್ಕೆ ಪಡೆದಿರುವ ಚನ್ನರಾಯಪಟ್ಟಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details