ಕರ್ನಾಟಕ

karnataka

ETV Bharat / state

ಪ್ರೀತಿ ಮಾಡಬಾರದು, ಮಾಡಿದರೆ ಹೀಗೆ ಪ್ರೇಮಿಗಳು ಸಾಯಬಾರದು..

ಕೆರೆಗೆ ಹಾರಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕೆರೆಗೆ ಬಿದ್ದು ಪ್ರೇಮಿಗಳು ಆತ್ಮಹತ್ಯೆ

By

Published : Oct 13, 2019, 5:26 PM IST

ಹಾಸನ:ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ. ಸಕಲೇಶಪುರದ ದೊಡ್ಡ ಕೆರೆಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ಪ್ರವೀಣ್ (25) ಹಾಗೂ ಪವಿತ್ರ (24) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಪ್ರವೀಣ್ ಸಕಲೇಶಪುರ ತಾಲೂಕಿನ ಹಾರ್ಲೆ ಕೂಡಿಗೆ ಗ್ರಾಮದವನಾದರೆ, ಪವಿತ್ರ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಕಟ್ಟೆಬೈಲು ಗ್ರಾಮದವಳು ಎಂದು ತಿಳಿದು ಬಂದಿದೆ.

ಇವರು ಇದೇ ತಿಂಗಳ 11ರಂದು ಧರ್ಮಸ್ಥಳದಲ್ಲಿ ಮದುವೆ ಮಾಡಿಕೊಂಡು ಸಕಲೇಶಪುರಕ್ಕೆ ಬಂದಿದ್ದರು. ನಂತರ ಸಕಲೇಶಪುರ ಬಸ್ ನಿಲ್ದಾಣದಲ್ಲಿಯೇ ಸ್ವಲ್ಪ ಹೊತ್ತು ಕಳೆದಿದ್ದ ಇವರು, ಬಳಿಕ ಇಬ್ಬರು ಬಸ್ ನಿಲ್ದಾಣಕ್ಕೆ ಸಮೀಪವಿರುವ ದೊಡ್ಡಕೆರೆಗೆ ಹಾರಿದ್ದಾರೆ ಎಂದು ಹೇಳಲಾಗುತ್ತಿದೆ. ಭಾನುವಾರ ಬೆಳಗ್ಗೆ ಕೆರೆಯಲ್ಲಿ ಮೃತದೇಹಗಳು ಪರಸ್ಪರ ಅಪ್ಪಿಕೊಂಡ ಸ್ಥಿತಿಯಲ್ಲಿ ತೇಲುತ್ತಿರುವುದನ್ನು ಕಂಡ ಸ್ಥಳೀಯರು ಸಕಲೇಶಪುರ ನಗರ ಠಾಣೆಗೆ ಮಾಹಿತಿ ನೀಡಿದ್ದರು.

ಕೆರೆಗೆ ಹಾರಿ ಪ್ರೇಮಿಗಳಿಬ್ಬರು ಆತ್ಮಹತ್ಯೆ..

ಮನೆಯವರ ವಿರೋಧಕ್ಕೆ ಹೆದರಿ ಆತ್ಮಹತ್ಯೆ?:

ಇಬ್ಬರ ಪ್ರೀತಿಗೆ ಇಬ್ಬರ ಮನೆಯಲ್ಲೂ ಕೂಡ ವಿರೋಧವಿತ್ತು. ಹೀಗಾಗಿ ಮನೆಯವರಿಗೆ ಹೆದರಿ ಧರ್ಮಸ್ಥಳದಲ್ಲಿ ಮದುವೆಯಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇನ್ನು, ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪವಿತ್ರಳ ಬಗ್ಗೆ ನಾಪತ್ತೆ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮೃತರನ್ನು ಸುಲಭವಾಗಿ ಪತ್ತೆ ಮಾಡಲಾಗಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ABOUT THE AUTHOR

...view details