ಹಾಸನ:ಮಾನವೀಯ ಮೌಲ್ಯಗಳಿಂದ ತುಂಬಿರುವ ರಾಮಾಯಣ ಮಹಾಕಾವ್ಯವನ್ನು ರಚಿಸಿದ ವಾಲ್ಮೀಕಿ ಸಾಧನೆ ವಿಶ್ವಕ್ಕೆ ಮಾದರಿ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷೆ ಶಿರಿನ್ ತಾಜ್ ಅಭಿಪ್ರಾಯಪಟ್ಟರು.
ಜಿಲ್ಲೆಯ ಆಲೂರು ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ಮಹರ್ಷಿ ಒಬ್ಬ ಋುಷಿ, ಸಂಸ್ಕೃತ ಕವಿ, ರಾಮಾಯಣ ಮಹಾಕಾವ್ಯದ ಕರ್ತೃ. ಮಹಾಕಾವ್ಯದ ಮೂಲಕ ವಿಶ್ವದ ಗಮನ ಸೆಳೆದ ಮಾನವತಾವಾದಿ. ಅವರ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅನುಸರಿಸಿ ನೆಮ್ಮದಿಯ ಜೀವನ ನಡೆಸಬೇಕು ಎಂದು ಸಲಹೆ ಮಾಡಿದರು.