ಕರ್ನಾಟಕ

karnataka

ETV Bharat / state

ಕಾಡಾನೆ ದಾಳಿಗೆ ವ್ಯಕ್ತಿ ಸಾವು: ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ, ಪರಿಶೀಲನೆ - ಕಾಡಾನೆ ದಾಳಿಗೆ ಹಾವೇರಿ ವ್ಯಕ್ತಿ ಸಾವು

ಹಾಸನ ಜಿಲ್ಲೆಯ ಕಾಫಿ ತೋಟದಲ್ಲಿ ಕೆಲಸ‌ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನಾಸ್ಥಳಕ್ಕೆ ಅರೇಹಳ್ಳಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿನೆ ನಡೆಸಿದರು.

man-killed-in-wild-elephant-attack
ಕಾಡಾನೆ ದಾಳಿಗೆ ವ್ಯಕ್ತಿ ಸಾವು

By

Published : May 8, 2021, 7:43 PM IST

ಹಾಸನ: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಕಾಡಾನೆ ದಾಳಿಗೆ ಬಲಿಯಾಗಿದ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಬಳಿ‌ ಇಂದು ನಡೆದಿದೆ.

ತಮಿಳುನಾಡು ಮೂಲದ ಶಿವು (50) ಮೃತ ದುರ್ದೈವಿ. ಕಾಫಿ ತೋಟದಲ್ಲಿ ಕೆಲಸ‌ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನಾಸ್ಥಳಕ್ಕೆ ಅರೇಹಳ್ಳಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಾಸನ ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆ ಹಾವಳಿ

ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದೆ. ಸಕಲೇಶಪುರ ತಾಲೂಕಿನ ಮಠಸಾಗರ ಬಳಿ, ಕಾಫಿ ತೋಟವೊಂದರಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ. ಮೀತಿಮೀರದ ಕಾಡಾನೆಗಳ ದಾಳಿಯಿಂದ ಈ ಭಾಗದ ರೈತರು ಕಂಗಾಲಾಗಿ ಹೋಗಿದ್ದಾರೆ. ದಾಳಿಯಿಂದ ಅಪಾರ ಪ್ರಮಾಣದ ಕಾಫಿ, ಬಾಳೆ, ಮೆಣಸು ಬೆಳೆ ನಾಶವಾಗಿದೆ.

ಜೀವ ಭಯದಲ್ಲಿ ಕೆಲಸಕ್ಕೆ ಬರಲು ಕಾರ್ಮಿಕರ ಹಿಂದೇಟು

ಇನ್ನೊಂದೆಡೆ ಜೀವ ಭಯದಿಂದ ಕಾಫಿ ತೋಟಕ್ಕೆ ಕೆಲಸಕ್ಕೆ ‌ಬರಲು ಕಾರ್ಮಿಕರು ‌ಹಿಂದೇಟು ಹಾಕುತ್ತಿದ್ದಾರೆ. ಮತ್ತೊಂದೆಡೆ ಕಾಫಿ ಬೆಳೆಗಾರರು ಹಾಗೂ ರೈತ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ, ಆನೆಗಳನ್ನು ಕಾಡಿಗಟ್ಟುವಂತೆ ಇಲ್ಲಿನ ಜನರು ಒತ್ತಾಯಿಸಿದ್ದಾರೆ.

ABOUT THE AUTHOR

...view details