ಮಂಗಳೂರು-ಬೆಂಗಳೂರು ರೈಲು ಮಾರ್ಗ ಎರಡು ದಿನ ಸಂಚಾರ ಸ್ಥಗಿತ.. - ಗುಡ್ಡ ಕುಸಿತ ಹಿನ್ನೆಲೆ ಸಕಲೇಶಪುರ ಮಂಗಳೂರು ರೈಲು ಸಂಚಾರ ಸ್ಥಗಿತ
ಶಿರಾಡಿ ಘಾಟ್ ರೈಲು ಮಾರ್ಗದ ಸಿರಿಬಾಗಿಲು ಸಮೀಪದ ಮಣಿಭಂಡ ಬಳಿ ರೈಲು ಹಳಿಗಳ ಬಳಿ ಇರುವ ಅಪಾಯಕಾರಿ ಬಂಡೆಯನ್ನು ತೆರವುಗೊಳಿಸುವ ಸಲುವಾಗಿ ಎರಡು ದಿನ ರೈಲು ಸಂಚಾರ ಸ್ಥಗಿತಗೊಳಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.
![ಮಂಗಳೂರು-ಬೆಂಗಳೂರು ರೈಲು ಮಾರ್ಗ ಎರಡು ದಿನ ಸಂಚಾರ ಸ್ಥಗಿತ..](https://etvbharatimages.akamaized.net/etvbharat/prod-images/768-512-3901144-191-3901144-1563680958614.jpg)
ಹಾಸನ: ಮಂಗಳೂರು-ಬೆಂಗಳೂರು ನಡುವಿನ ರೈಲು ಓಡಾಟವನ್ನು ಇಂದು ಮತ್ತು ನಾಳೆ ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಶಿರಾಡಿ ಘಾಟ್ ರೈಲು ಮಾರ್ಗದ ಸಿರಿಬಾಗಿಲು ಸಮೀಪದ ಮಣಿಭಂಡ ಬಳಿ ರೈಲು ಹಳಿಗಳ ಬಳಿ ಇರುವ ಅಪಾಯಕಾರಿ ಬಂಡೆಯನ್ನು ತೆರವುಗೊಳಿಸುವ ಸಲುವಾಗಿ ಎರಡು ದಿನ ರೈಲು ಸಂಚಾರ ಸ್ಥಗಿತಗೊಳಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.
ಘಾಟಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಅಪಾಯಕಾರಿ ಬಂಡೆ ಯಾವುದೇ ಕ್ಷಣದಲ್ಲಾದರೂ ರೈಲು ಹಳಿಯ ಮೇಲೆ ಉರುಳಿ ಬೀಳುವ ಸಾಧ್ಯತೆಯಿದೆ. ಹೀಗಾಗಿ ಯಾವುದೇ ಅಪಾಯ ಸಂಭವಿಸುವ ಮುನ್ನವೇ ರೈಲ್ವೆ ಇಲಾಖೆ ಎಚ್ಚೆತ್ತಿದ್ದು, ಬಂಡೆ ತೆರವಿಗೆ ಸಿದ್ಧತೆ ನಡೆಸಿದೆ.