ಕರ್ನಾಟಕ

karnataka

ETV Bharat / state

ಮರಾಠ ಅಭಿವೃದ್ಧಿ ಪ್ರಾಧಿಕಾರ ರದ್ದುಪಡಿಸದಿದ್ರೆ ಡಿ. 5ರ ಕರ್ನಾಟಕ ಬಂದ್​ಗೆ ಬೆಂಬಲ​: ಕರವೇ ಪ್ರವೀಣ್ ಶೆಟ್ಟಿ ಬಣ - Praveen Shetty

ಮಾನ್ಯ ಮುಖ್ಯಮಂತ್ರಿಗಳು ಇತ್ತೀಚೆಗೆ ಯಾವುದೋ ದೊಡ್ಡ ಪ್ರಭಾವಿಗಳಿಗೆ ಮಣಿದು ಮತ್ತು ಬೆಳಗಾವಿಯ ರಾಜಕೀಯ ದೃಷ್ಟಿಯಿಂದ ಕರ್ನಾಟಕ ರಾಜ್ಯದಲ್ಲಿ ಪ್ರಾಧಿಕಾರ ರಚನೆ ಮಾಡುತ್ತಿರುವುದು ದುರದೃಷ್ಟಕರವಾಗಿದೆ. ಒಂದು ವೇಳೆ ಮರಾಠ ಪ್ರಾಧಿಕಾರ ರದ್ದುಪಡಿಸದಿದ್ರೆ ಡಿ. 5ರಂದು ಕರ್ನಾಟಕ ಬಂದ್​ಗೆ ಬೆಂಬಲಿಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಹೇಳಿದ್ದಾರೆ.

ಸರ್ಕಾರಕ್ಕೆ ಮನವಿ ಮಾಡಿಕೊಂಡ ಕರ್ನಾಟಕ ರಕ್ಷಣಾ ವೇದಿಕೆ
ಸರ್ಕಾರಕ್ಕೆ ಮನವಿ ಮಾಡಿಕೊಂಡ ಕರ್ನಾಟಕ ರಕ್ಷಣಾ ವೇದಿಕೆ

By

Published : Nov 20, 2020, 5:35 PM IST

Updated : Nov 20, 2020, 8:16 PM IST

ಅರಕಲಗೂಡು:ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮರಾಠ ಪ್ರಾಧಿಕಾರವನ್ನು ರದ್ದುಪಡಿಸದಿದ್ರೆ ಡಿ. 5ರಂದು ಕರ್ನಾಟಕ ಬಂದ್‌ಗೆ ಬೆಂಬಲಿಸಿ ಉಗ್ರ ಪ್ರತಿಭಟನೆ ಮಾಡುವುದಾಗಿ ಕರವೇ ಕಾರ್ಯಕರ್ತರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಸರ್ಕಾರಕ್ಕೆ ಮನವಿ ಮಾಡಿಕೊಂಡ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಕರವೇ ಕಾರ್ಯಕರ್ತರು, ಕರ್ನಾಟಕ ರಾಜ್ಯದಲ್ಲಿ ಕರಾಳ ದಿನಾಚರಣೆ ಮಾಡುತ್ತಿರುವವರಲ್ಲಿ ಹೆಚ್ಚಾಗಿ ಮರಾಠ ಸಮುದಾಯಕ್ಕೆ ಸೇರಿದವರೇ ಆಗಿರುತ್ತಾರೆ. ಈ ರೀತಿ ಮಾಡುತ್ತಿರುವ ಸಮುದಾಯಕ್ಕೆ ಮರಾಠ ಪ್ರಾಧಿಕಾರ ರಚನೆ ಮಾಡಿರುವುದು ದುರದೃಷ್ಟಕರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರಿಂದ ಪ್ರತಿಭಟನೆ

ಮಾನ್ಯ ಮುಖ್ಯಮಂತ್ರಿಗಳು ಇತ್ತೀಚೆಗೆ ಯಾವುದೋ ದೊಡ್ಡ ಪ್ರಭಾವಿಗಳಿಗೆ ಮಣಿದು ಮತ್ತು ಬೆಳಗಾವಿಯ ರಾಜಕೀಯ ದೃಷ್ಟಿಯಿಂದ ಕರ್ನಾಟಕ ರಾಜ್ಯದಲ್ಲಿ ಪ್ರಾಧಿಕಾರ ರಚನೆ ಮಾಡುತ್ತಿರುವುದು ದುರದೃಷ್ಟಕರವಾಗಿದೆ. ಅದರಲ್ಲೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗವಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಕನ್ನಡಿಗರಿಗೆ ಮರಾಠಿಗರು ಒಂದಲ್ಲ ಒಂದು ಕಾರಣಕ್ಕೆ ಕಿರುಕುಳ ನೀಡುತ್ತಿದ್ದಾರೆ. ರಾಜ್ಯ ಸರ್ಕಾರ ಇಲ್ಲಿಯವರೆಗೂ ಯಾವುದೇ ಕ್ರಮವನ್ನು ಕೈಗೊಂಡಿರುವುದಿಲ್ಲ. ಇದರ ಬಗ್ಗೆ ಕನ್ನಡಿಗರು ಎಷ್ಟು ಬಾರಿ ಪ್ರತಿಭಟನೆ ನಡೆಸಿದ್ದರು ಕೂಡ ಯಾವುದೇ ಪ್ರಯೋಜನವಾಗಿಲ್ಲ ಎಂದರು.

ತಮ್ಮ ಮಗನ ಭವಿಷ್ಯಕ್ಕಾಗಿ ಸಿಎಂ‌ ಬಿಎಸ್‌ವೈ ರಾಜಕಾರಣ ಮಾಡುತ್ತಿದ್ದು, ಸಮಾಜ ಒಡೆದು ಬಾಂಧವ್ಯ ಹಾಳು ಮಾಡುತ್ತಿದ್ದಾರೆ. ನಾವ್ಯಾರೂ ಮರಾಠಿ ವಿರೋಧಿಗಳಲ್ಲ. ಮರಾಠ ಪ್ರಾಧಿಕಾರ ವಾಪಸ್ ಪಡೆಯಬೇಕು. ಇಲ್ಲವಾದ್ರೆ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Last Updated : Nov 20, 2020, 8:16 PM IST

ABOUT THE AUTHOR

...view details