ಹಾಸನ: ಹಾಸನ ಜಿಲ್ಲೆಯಲ್ಲಿ ಗಾಂಜಾ ದಂಧೆ ಹೆಚ್ಚಾಗುತ್ತಿದ್ದು ಅರಸೀಕೆರೆ ಒಂದರಲ್ಲಿ ಈಗಾಗಲೇ ಐದು ಪ್ರಕರಣಗಳು ದಾಖಲಾಗಿದೆ.
ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ... - hassan crime news
ಅರಸೀಕೆರೆಯ ಗರುಡನಗಿರಿ ರಸ್ತೆಯಲ್ಲಿ ಬಾಟಲಿ ನಾಗರಾಜು ಫ್ಯಾಕ್ಟರಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿ ಅವರಿಂದ 150 ಗ್ರಾಂ ಗಾಂಜಾ ಮತ್ತು ಒಂದು ಕಾರನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳ ಬಂಧನ
ಅರಸೀಕೆರೆಯ ಗರುಡನಗಿರಿ ರಸ್ತೆಯಲ್ಲಿ ಬಾಟಲಿ ನಾಗರಾಜು ಫ್ಯಾಕ್ಟರಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಸೀಕೆರೆ ಪೊಲೀಸರು ಗಾಂಜಾ ಮಾರುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅರಸೀಕೆರೆ ನಗರದ ನವಾಜ್ (24) ಮತ್ತು ಶಬಾಜ್(23) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 150 ಗ್ರಾಂ ಗಾಂಜಾ ಮತ್ತು ಒಂದು ಕಾರನ್ನು ವಶಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿ ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.