ಹಾಸನ:ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರ ಸಭೆ ನಡೆಸಿ ನಂತರ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದರು.
ಸೋಂಕಿತರ ಪತ್ತೆ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಸಭೆ: ಹಾಸನ ಡಿಸಿ - ಹಾಸನ ಡಿಸಿ
ಸೋಂಕಿತರು ಪತ್ತೆಯಾಗಿರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರ ಸಭೆ ನಡೆಸಿ ನಂತರ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ದಿನಗಳ ಹಿಂದೆ ಚನ್ನರಾಯಪಟ್ಟಣಕ್ಕೆ ಬಂದವರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ ಪಾಸಿಟಿವ್ ಇರುವುದು ಬೆಳಕಿಗೆ ಬಂದಿದೆ. ಆದರೆ ಇವರು ಹಾಸನ ನಗರ ಸೇರಿದಂತೆ ಯಾವ ಭಾಗದಲ್ಲೂ ಓಡಾಡಿರುವುದಿಲ್ಲ.
ಗಡಿಯಲ್ಲೇ ತಡೆದು ನೇರವಾಗಿ ಕ್ವಾರಂಟೈನ್ ಮಾಡಿರುವುದರಿಂದ ಆಗುತ್ತಿದ್ದ ಹೆಚ್ಚಿನ ಅಪಾಯ ತಪ್ಪಿದಂತಾಗಿದೆ ಎಂದರು. ಇಬ್ಬರು ಮಕ್ಕಳು ಸೇರಿ ಒಟ್ಟು ನಾಲ್ಕು ಜನರಿಗೆ ಪಾಸಿಟಿವ್ ಪತ್ತೆಯಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ನಂತರದಲ್ಲಿ ಹಾಸನ ಜಿಲ್ಲೆಯ ಕ್ರಮದ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದರು.