ಕರ್ನಾಟಕ

karnataka

ETV Bharat / state

ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿ: ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವ ಸಿ.ಟಿ. ರವಿ - ಸಚಿವ ಸಿ.ಟಿ.ರವಿ ಲೆಟೆಸ್ಟ್​ ನ್ಯೂಸ್​

ಚಿಕ್ಕಮಗಳೂರಿನಿಂದ ಹಾಸನ ಮಾರ್ಗವಾಗಿ ಬೆಂಗಳೂರಿಗೆ ಹೊರಟಿದ್ದ ಸಚಿವ ಸಿ.ಟಿ. ರವಿ ಬರುತ್ತಿದ್ದ ಮಾರ್ಗದಲ್ಲಿ ವಾಹನ ಅಪಘಾತದಲ್ಲಿ ಗಾಯಗೊಂಡ ಯುವತಿಯನ್ನು ತಮ್ಮ ಕಾರಿನಲ್ಲಿ ಕರೆತಂದು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Minister CT Ravi
ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವ ಸಿ.ಟಿ.ರವಿ

By

Published : Aug 3, 2020, 3:33 PM IST

ಹಾಸನ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿಯನ್ನು ತಮ್ಮ ವಾಹನದಲ್ಲಿ ಕರೆತಂದು ಅಸ್ಪತ್ರೆಗೆ ದಾಖಲಿಸಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಮಾನವೀಯತೆ ಮೆರೆದಿದ್ದಾರೆ.

ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವ ಸಿ.ಟಿ.ರವಿ

ಚಿಕ್ಕಮಗಳೂರಿನಿಂದ ಹಾಸನ ಮಾರ್ಗವಾಗಿ ಬೆಂಗಳೂರಿಗೆ ಹೊರಟಿದ್ದ ಸಚಿವ ಸಿ.ಟಿ. ರವಿ ಅವರು ಬರುತ್ತಿದ್ದ ಮಾರ್ಗದಲ್ಲಿ ವಾಹನ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಯುವತಿಯನ್ನು ತಮ್ಮ ಕಾರಿನಲ್ಲಿ ಕರೆ ತಂದು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ.

ಹಾಸನದ ಹೊರವಲಯದ ಉದ್ದೂರು ಹೊಸಳ್ಳಿ ಸಮೀಪ ಯುವತಿಯೊಬ್ಬಳು ದ್ವಿ ಚಕ್ರವಾಹನದಲ್ಲಿ ಬರುವಾಗ ರಸ್ತೆ ಅಪಘಾತ ಸಂಭವಿಸಿ, ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದಳು. ತಕ್ಷಣ ಸಚಿವರು ತಮ್ಮ ಕಾರಿನಲ್ಲೇ ಕರತಂದು ಹಾಸನದ ನಾನ್ ಕೋವಿಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವತಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.

ABOUT THE AUTHOR

...view details