ಕರ್ನಾಟಕ

karnataka

ಶಾಲೆ ಪ್ರಾರಂಭ ವಿಚಾರ ಕ್ಯಾಬಿನೆಟ್​ನಲ್ಲಿ ಚರ್ಚಿಸಿ ನಿರ್ಧರಿಸುತ್ತೇವೆ: ಸಚಿವ ಕೆ.ಗೋಪಾಲಯ್ಯ

ಶಾಲೆ ಪ್ರಾರಂಭಿಸುವ ವಿಚಾರದಲ್ಲಿ ನನ್ನೊಬ್ಬನ ತೀರ್ಮಾನ ಅಂತಿಮ‌ ಅಲ್ಲ. ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಪೋಷಕರ ಅಭಿಪ್ರಾಯ ಪಡೆಯುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

By

Published : Oct 8, 2020, 5:45 PM IST

Published : Oct 8, 2020, 5:45 PM IST

ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ
ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ

ಹಾಸನ:ರಾಜ್ಯದಲ್ಲಿ ಶಾಲೆ ಆರಂಭದ ಬಗ್ಗೆ ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನ ಕೈಕೊಳ್ಳುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, "ಮುಂದಿನ ಗುರುವಾರ ಸಂಪುಟ ‌ಸಭೆ ನಡೆಯಲಿದೆ. ಶಾಲೆ ಪ್ರಾರಂಭಿಸುವ ವಿಚಾರದಲ್ಲಿ ನನ್ನೊಬ್ಬನ ತೀರ್ಮಾನ ಅಂತಿಮ‌ ಅಲ್ಲ. ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಪೋಷಕರ ಅಭಿಪ್ರಾಯ ಪಡೆಯುತ್ತೇವೆ. ಎಲ್ಲವನ್ನೂ ಸಿಎಂ ಗಮನಕ್ಕೆ ತಂದು ಅಂತಿಮ ತೀರ್ಮಾನ ಮಾಡಲಾಗುವುದು" ಎಂದರು.

ಮಕ್ಕಳ‌ ಭವಿಷ್ಯದ ದೃಷ್ಟಿಯಿಂದ ತೀರ್ಮಾನ ಕೈಗೊಳ್ಳಲಾಗುವುದು. ಏನೇ ಮಾಡಿದರೂ ತರಾತುರಿಯಾಗಿ ಮಾಡುವುದಿಲ್ಲ ಎಂದ ಅವರು, ಕಡ್ಡಾಯವಾಗಿ ಮಾಸ್ಕ್ ಹಾಕಲು ಮನವಿ ಮಾಡಿದರು.

ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಳಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, "ಬಿಜೆಪಿ ರಾಷ್ಟ್ರೀಯ ಪಕ್ಷ, ಹೈಕಮಾಂಡ್ ಇದೆ. ಇಂದು ಅಥವಾ ನಾಳೆ ಅಭ್ಯರ್ಥಿ ಹೆಸರು ಘೋಷಣೆಯಾಗಲಿದೆ" ಎಂದು ತಿಳಿಸಿದರು.

ಶಿರಾ, ಆರ್​ಆರ್ ನಗರದಲ್ಲಿ ಬಿಜೆಪಿ ನೂರಕ್ಕೆ ನೂರರಷ್ಟು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಹಾಸನಾಂಬೆ ಜಾತ್ರಾ ಮಹೋತ್ಸವ ಮೀಟಿಂಗ್ ಮಾಡಲು ಬಂದಿದ್ದೇನೆ. ಎಲ್ಲರೊಂದಿಗೆ ಚರ್ಚಿಸಿ ಕೊರೊನಾ ಹಿನ್ನೆಲೆಯಲ್ಲಿ ಸೂಕ್ತ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.

ABOUT THE AUTHOR

...view details