ಹಾಸನ:ಆಹ್ವಾನ ಪತ್ರಿಕೆಯಲ್ಲಿ ಹೆಸರು ಮುದ್ರಣಗೊಂಡಿರುವ ಜನಪ್ರತಿನಿಧಿಗಳು ನ.16ರ ವರೆಗೆ ಯಾವತ್ತಾದರೂ ಒಮ್ಮೆ ಕುಟುಂಬ ಸಮೇತರಾಗಿ ಬಂದು ಹಾಸನಾಂಬೆಯ ದರ್ಶನ ಮಾಡಲು ಅವಕಾಶ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಮಾಹಿತಿ ನೀಡಿದ್ದಾರೆ.
ಆಹ್ವಾನ ಪತ್ರಿಕೆಯಲ್ಲಿ ಹೆಸರಿದ್ದವರಿಗೆ ಹಾಸನಾಂಬೆ ದರ್ಶನದ ಅವಕಾಶ - ಜಿಲ್ಲಾಧಿಕಾರಿ ಆರ್. ಗಿರೀಶ್,
ಶಿಷ್ಟಾಚಾರದ ಪ್ರಕಾರ ಆಹ್ವಾನ ಪತ್ರಿಕೆಯಲ್ಲಿ ಹೆಸರು ಮುದ್ರಣಗೊಂಡಿರುವ ಗಣ್ಯರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಬೇಕು ಹಾಗಾಗಿ ಅವರು ಯಾವುದಾದರೊಂದು ದಿನ ಕುಟುಂಬ ಸಮೇತರಾಗಿ ಬಂದು ದೇವರ ದರ್ಶನ ಪಡೆಯಬಹುದಾಗಿದೆ ಎಂದಿದ್ದಾರೆ.
![ಆಹ್ವಾನ ಪತ್ರಿಕೆಯಲ್ಲಿ ಹೆಸರಿದ್ದವರಿಗೆ ಹಾಸನಾಂಬೆ ದರ್ಶನದ ಅವಕಾಶ minister-k-gopalaiah](https://etvbharatimages.akamaized.net/etvbharat/prod-images/768-512-9444343-thumbnail-3x2-hsn.jpg)
ಸಚಿವ ಕೆ ಗೋಪಾಲಯ್ಯ
ಹಾಸನಾಂಬೆ ದರ್ಶನ ಕುರಿತು ಗೋಪಾಲಯ್ಯ ಮಾಹಿತಿ
ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಷ್ಟಾಚಾರದ ಪ್ರಕಾರ ಆಹ್ವಾನ ಪತ್ರಿಕೆಯಲ್ಲಿ ಹೆಸರು ಮುದ್ರಣಗೊಂಡಿರುವ ಗಣ್ಯರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಬೇಕು ಹಾಗಾಗಿ ಅವರು ಯಾವುದಾದರೊಂದು ದಿನ ಕುಟುಂಬ ಸಮೇತರಾಗಿ ಬಂದು ದೇವರ ದರ್ಶನ ಪಡೆಯಬಹುದಾಗಿದೆ ಎಂದರು.
ಶಾಸಕ ಪ್ರೀತಂ ಜೆ. ಗೌಡ, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್ ಹಾಜರಿದ್ದರು.