ಕರ್ನಾಟಕ

karnataka

ETV Bharat / state

ಹಾಸನಾಂಬೆ ದರ್ಶನಕ್ಕೆ ಬರುವವರಿಗೆ ಎರಡು ಬಾರಿ ಲಸಿಕೆ ಕಡ್ಡಾಯ: ಕೆ. ಗೋಪಾಲಯ್ಯ - ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್‌ಗೌಡ

ಹಾಸನಾಂಬೆ ದರ್ಶನದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ 300 ಮಂದಿ ಪೊಲೀಸ್ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್‌ಗೌಡ ತಿಳಿಸಿದ್ದಾರೆ.

K. Gopalayya
ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ

By

Published : Oct 26, 2021, 9:05 PM IST

ಹಾಸನ: ಹಾಸನಾಂಬೆ ದೇವಿ ದರ್ಶನಕ್ಕೆ ಬರುವವರು ಎರಡು ಬಾರಿ ಲಸಿಕೆ ಹಾಕಿಸಿರಬೇಕು. ಜೊತೆಗೆ ಆಧಾರ್ ಕಾರ್ಡ್ ಇಲ್ಲವೇ ವೋಟರ್​ ಐಡಿ ತೋರಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರು ತಿಳಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಮೊದಲು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಇಳಿಕೆಯಾಗಿದೆ. ಅಲ್ಲದೇ, ಹಾಸನಾಂಬೆ ದರ್ಶನ ಮಾಡಲು ಸಾರ್ವಜನಿಕರಿಗೆ ಅವಕಾಶ ನೀಡುವಂತೆ ನೂರಾರು ಮನವಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ

ಅ.28 ರಂದು ಬಾಗಿಲು ತೆರೆಯುವ ಮೊದಲ ದಿನ ಮತ್ತು ಬಾಗಿಲು ಮುಚ್ಚುವ ಕೊನೆಯ ದಿನವಾದ ನ. 6 ರಂದು ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧವಿದೆ. ಉಳಿದ ದಿನಗಳಲ್ಲಿ ಅ, 29 ರಿಂದ ನವೆಂಬರ್ 5ರ ವರೆಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 1 ರವರೆಗೆ ಮತ್ತು 3 ರಿಂದ ರಾತ್ರಿ 8 ರವರೆಗೆ ಸಾರ್ವಜನಿಕರಿಗೆ ದರ್ಶನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ದರ್ಶನ ಮಾಡುವವರು ಲಸಿಕೆ ಪಡೆದಿರಬೇಕು:ದರ್ಶನಕ್ಕೆ ಬರುವ ಪ್ರತಿಯೊಬ್ಬ ಸಾರ್ವಜನಿಕರು ಎರಡು ಬಾರಿ ಲಸಿಕೆ ಹಾಕಿಸಿರುವ ಸರ್ಟಿಫಿಕೇಟ್ ಜೆರಾಕ್ಸ್ ಮತ್ತು ಆಧಾರ್ ಅಥವಾ ಚುನಾವಣಾ ಗುರುತಿನ ಚೀಟಿ ತರುವುದು ಕಡ್ಡಾಯವಾಗಿದೆ. ಈ ವೇಳೆ, ದೇವಾಲಯದಲ್ಲೇ ಪ್ರತ್ಯೇಕ ಬೂತ್ ಮಾಡಿ ಪ್ರತಿಯೊಬ್ಬರನ್ನು ಪರಿಶೀಲನೆ ಮಾಡಲಾಗುವುದು.

ವ್ಯಾಕ್ಸಿನ್ ಪಡೆಯದೇ ಬರುವ ಭಕ್ತರಿಗೆ ಪ್ರವೇಶವಿಲ್ಲ. ದೇವಾಲಯಕ್ಕೆ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಮೂಲ ಸೌಕರ್ಯ ಕಲ್ಪಿಸಲು ಸಹ ಕ್ರಮ ಕೈಗೊಳ್ಳಲಾಗಿದೆ. ಹಾಸನಾಂಬಾ ಉತ್ಸವಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಅವರ ಭೇಟಿ ಅಸಾಧ್ಯವಾಗಿದೆ. ಮತ್ತೊಮ್ಮೆ ಸಿಎಂ ಅವರನ್ನು ಭೇಟಿ ಮಾಡಿ ದೇವಸ್ಥಾನಕ್ಕೆ ಆಹ್ವಾನ ನೀಡಿ ನವೆಂಬರ್ 6 ರಂದು ಬರಲು ಹೇಳುವುದಾಗಿ ತಿಳಿಸಿದರು.

ಮಕ್ಕಳಿಗೆ ಅವಕಾಶವಿಲ್ಲ: ಕೊರೊನಾ ಹಿನ್ನಲೆ ವಯೋವೃದ್ದರು ಮತ್ತು ಮಕ್ಕಳುಗಳಿಗೆ ಈ ಬಾರಿ ದರ್ಶನಕ್ಕೆ ಅವಕಾಶವಿಲ್ಲ. ಸಾರ್ವಜನಿಕರು ಕೋವಿಡ್ ಹಿನ್ನೆಲೆ ಸಹಕರಿಸಬೇಕು. ಇದರ ಜೊತೆಗೆ ದೇವಾಲಯದಲ್ಲಿಯೇ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಸಿಸಿಟಿವಿ ಕಣ್ಗಾವಲು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್‌ಗೌಡ ಮಾತನಾಡಿ, ದರ್ಶನ ಮಾಡುವ ಸಂದರ್ಭದಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುವುದು. ದೇವಿ ದರ್ಶನಕ್ಕೆ ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಮೂಲೆಗಳಿಂದ ಲಕ್ಷಾಂತರ ಭಕ್ತರು ಬರಲಿದ್ದಾರೆ. ಈ ವೇಳೆ, ಭಕ್ತರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.

600ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ :ದರ್ಶನದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ 300 ಮಂದಿ ಪೊಲೀಸ್ ನೇಮಕ ಮಾಡಲಾಗಿದೆ. ಅವರು ಮೂರು ಪಾಳಯದಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಆರೋಗ್ಯ ಇಲಾಖೆಯೊಂದಿಗೆ ಪೊಲೀಸ್ ಸಿಬ್ಬಂದಿ ಸಹಕಾರ ನೀಡಲಿದ್ದಾರೆ. ಸುಗಮವಾಗಿ ದರ್ಶನ ಪಡೆಯಲು ಬ್ಯಾರಿಕೇಡ್​, ಚೈನ್ ಸಿಸ್ಟಮ್ ಮಾಡಲಿದ್ದೇವೆ.

ಜಿಲ್ಲೆಯ ಎಲ್ಲಾ ಪೊಲೀಸ್ ಸಿಬ್ಬಂದಿ ದರ್ಶನದ ವೇಳೆ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಇತರ ಜಿಲ್ಲೆಯಿಂದ 700 ಹೋಂ ಗಾರ್ಡ್ ಮತ್ತು ವಾಹನಕ್ಕೆ ಮನವಿ ಮಾಡಲಾಗಿದೆ. ಹಾಸನಾಂಬೆ ದೇವಾಲಯದಲ್ಲಿ ಯಾವುದೇ ಗೊಂದಲವಾಗದಂತೆ ಈ ಬಾರಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ ಎಂದರು.

ವಿಶೇಷ ದರ್ಶನಕ್ಕೆ 300 ಮತ್ತು 1000 ರೂ: ಹಾಸನಾಂಬೆಯ ದರ್ಶನಕ್ಕೆ 300 ಹಾಗೂ 1000 ಮುಖಬೆಲೆಯ ಟಿಕೆಟ್ ನಿಗದಿ ಮಾಡಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಜಾತ್ರೆ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ. ಹಾಸನಾಂಬೆ ದರ್ಶನಕ್ಕೆ ವಿಶೇಷ ಪಾಸ್ ವ್ಯವಸ್ಥೆ ಮಾಡಲಾಗಿದೆ. ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ ಉಳಿದೆಲ್ಲ ದಿನಗಳಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿದೆ ಎಂದು ಅವರು ತಿಳಿಸಿದರು.

ಓದಿ:'ನಮ್ಮದು ಜಾತಿ ರಾಜಕಾರಣವಲ್ಲ, ನೀತಿ ರಾಜಕಾರಣ'- ಬಿಜೆಪಿಗೆ ಶಿವಕುಮಾರ್​ ಟಾಂಗ್​​

ABOUT THE AUTHOR

...view details