ಹಾಸನ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಮುಖ್ಯಮಂತ್ರಿಗಳು ಈ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಹೆಚ್ಚು ಟೆಸ್ಟ್ ಮಾಡುವಂತೆ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಖ್ಯಂಮತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಟ್ಸ್ಪಾಟ್ ಇರುವೆಡೆ ಹೆಚ್ಚಿನ ಪರೀಕ್ಷೆ ನಡೆಸಲು ಸೂಚಿಸಿದ್ದಾರೆ. ಕೊರೊನಾ ಹೆಚ್ಚಿರುವ ಕಡೆ ಹೆಚ್ಚು ಹೆಚ್ಚು ಟೀಂ ಮೂಲಕ ಕಾರ್ಯಾಚರಣೆ ನಡೆಸಲು ಸೂಚನೆ ನೀಡಿದ್ದಾರೆ ಎಂದರು.
ಸಂಬಂಧಿತ ಅಧಿಕಾರಿಗಳು ಕೊರೊನಾ ಬಗ್ಗೆ ಕಾರ್ಯಪ್ರವೃತ್ತರಾಗಲಿದ್ದಾರೆ. ಹೆಚ್ಚು ಆರ್‌ಟಿಪಿಸಿಆರ್ ಟೆಸ್ಟ್ಗೆ ಒತ್ತು ಕೊಡಲಾಗುವುದು. ಪ್ರತ್ಯೇಕ ವಾಹನದಲ್ಲಿ ವೈದ್ಯರ ಟೀಂ ಸಂಚರಿಸಲು ವ್ಯವಸ್ಥೆ ಮಾಡಲಾಗುವುದು. ಹೋಂ ಐಸೋಲೇಷನ್ನಲ್ಲಿ ಇರುವವರಿಗೆ ಫೋನ್ನಲ್ಲಿ ಹೆಚ್ಚಾಗಿ ಮಾಹಿತಿ ನೀಡಲಾಗುತ್ತಿತ್ತು. ಆದರೆ, ಈಗ ಪ್ರತ್ಯೇಕ ವಾಹನದಲ್ಲಿ ವೈದ್ಯರು ಹೋಂ ಐಸೋಲೇಷನ್ ಇರುವವರ ಬಳಿಗೆ ಹೋಗಲು ವ್ಯವಸ್ಥೆ ಮಾಡಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಪಾಸಿಟಿವ್ ಇರುವವರಿಗೆ ಗಂಭೀರ ಕಾಯಿಲೆ ಇದ್ದಾಗ ಆಸ್ಪತ್ರೆಗೆ ದಾಖಲಿಸಲಾಗುವುದು. ಯಾವುದೇ ಹಣಕಾಸಿನ ಸಮಸ್ಯೆಯಿಲ್ಲ. ಈ ಎಲ್ಲ ವಿಷಯಗಳ ಬಗ್ಗೆ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದರು.
ಶಾಲೆ ತೆರೆಯುವ ಬಗ್ಗೆ ಇಂದಿನ ವಿಡಿಯೋ ಕಾನ್ಫರೆನ್ಸ್ನಲ್ಲಿ ಚರ್ಚೆ ಆಗಿಲ್ಲ ಎಂದು ಇದೇ ವೇಳೆ ಮಾಹಿತಿ ನೀಡಿದರು. ವಿಡಿಯೋ ಕಾನ್ಫರೆನ್ಸ್ನಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲೆಯ ಇತರ ಅಧಿಕಾರಿಗಳು ಹಾಜರಿದ್ದರು.