ಕರ್ನಾಟಕ

karnataka

By

Published : Oct 31, 2019, 3:04 PM IST

ETV Bharat / state

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಸಚಿವ ಕಾರಜೋಳ ಕಿಡಿ

ಕುಂಟುತ್ತಾ ಸಾಗಿರುವ ರಾಷ್ಟ್ರೀಯ ಹೆದ್ದಾರಿ 75ರ (ಹಾಸನ ಬೈಪಾಸ್‌ನಿಂದ ಮಾರನಹಳ್ಳಿ) ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಿಂದಲೇ ಕೈಗೊಳ್ಳಲು ಸಚಿವ ಗೋವಿಂದ ಕಾರಜೋಳ ನಿರ್ಧರಿಸಲಾಗಿದೆ.

ಕಾರಜೋಳ ಕಿಡಿ

ಹಾಸನ: ಬೆಂಗಳೂರಿನಲ್ಲಿ ಸಚಿವ ಗೋವಿಂದ ಕಾರಜೋಳ ಅವರು ಬುಧವಾರ ಏರ್ಪಡಿಸಿದ್ದ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ, ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಿಂದಲೇ ಕೈಗೊಳ್ಳಲು ನಿರ್ಧಾರಿಸಿದ್ದಾರೆ.

ಕಾಮಗಾರಿ ಹೊಣೆ ಹೊತ್ತಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್‌ಗಳ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಹರಿಹಾಯ್ದರು. ಕೆಲಸ ಪ್ರಾರಂಭವಾಗಿ ಹಲವು ವರ್ಷಗಳೇ ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ. ಸಕಲೇಶಪುರ ತಾಲೂಕಿನ ಹೋರಾಟಗಾರರು ಹಗಲು ರಾತ್ರಿ ಪ್ರತಿಭಟನೆ ಮಾಡಬೇಕಾಯಿತು. ಬೆಂಗಳೂರು ಹಾಗೂ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯೇ ಹೀಗಾದರೆ ಬೇರೆ ರಸ್ತೆ ಕಾಮಗಾರಿಗಳ ಗತಿಯೇನು ಎಂದು ಪ್ರಶ್ನಿಸಿದರು.

ಸಚಿವ ಗೋವಿಂದ ಕಾರಜೋಳ ಮಾತನಾಡಿ, ಕಾಮಗಾರಿಗಾಗಿ ಬಿಡುಗಡೆಯಾಗಿರುವ 7 ಕೋಟಿ ರೂ. ಅನುದಾನವನ್ನು ಕೂಡಲೇ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಬೇಕು. ಮುಂದಿನ ಎರಡು ದಿನಗಳಲ್ಲಿ ಇಲಾಖೆಯಿಂದಲೇ ಕೆಲಸ ಪ್ರಾರಂಭಿಸಲಾಗುವುದು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್‌ಗಳ ನಿರ್ಲಕ್ಷೃ ಧೋರಣೆ ಕುರಿತು ಕೇಂದ್ರ ಸಚಿವರಿಗೆ ವರದಿ ಸಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

7 ಕೋಟಿ ರೂ.ಗಳಲ್ಲಿ ಕೆಲಸ ಮುಗಿಯದಿದ್ದರೆ ಮತ್ತಷ್ಟು ಬಿಡುಗಡೆ ಮಾಡಲಾಗುವುದು. ಕಾಮಗಾರಿ ಪೂರ್ಣಗೊಳ್ಳುವವರೆಗೆ ಸುಗಮ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.

ABOUT THE AUTHOR

...view details