ಕರ್ನಾಟಕ

karnataka

ETV Bharat / state

ಹೇಮಾವತಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಚಿವ ಮಾಧುಸ್ವಾಮಿ - Benglure riot case

ಹಾಸನ ಜಿಲ್ಲೆಯ ರೈತರ ಜೀವನಾಡಿ ಗೊರೂರು ಹೇಮಾವತಿ ಜಲಾಶಯಕ್ಕೆ ಇಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಬಾಗಿನ ಅರ್ಪಿಸಿದರು.

ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ ಮಾಧುಸ್ವಾಮಿ
ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ ಮಾಧುಸ್ವಾಮಿ

By

Published : Aug 21, 2020, 12:59 PM IST

ಹಾಸನ: ಬೆಂಗಳೂರು ಗಲಭೆ ಪ್ರಕರಣದಿಂದ ಉಂಟಾಗಿರುವ ನಷ್ಟವನ್ನು ಆರೋಪಿಗಳಿಂದಲೇ ವಸೂಲಿ ಮಾಡುತ್ತೇವೆ. ಗಲಭೆ ಸೃಷ್ಟಿಸಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ಹಾಸನ ಜಿಲ್ಲೆಯ ರೈತರ ಜೀವನಾಡಿ ಗೊರೂರು ಹೇಮಾವತಿ ಜಲಾಶಯಕ್ಕೆ ಇಂದು ಬಾಗಿನ ಅರ್ಪಿಸಿ ಬಳಿಕ ಮಾತನಾಡಿದ ಅವರು, ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪ್ರಕರಣದಲ್ಲಿ ಈಗಾಗಲೇ ತಪ್ಪಿತಸ್ಥರನ್ನು ಗುರುತಿಸಿ ನ್ಯಾಯಾಂಗ ಬಂಧನಕ್ಕೆ ಕೆಲವರನ್ನು ನೀಡಲಾಗಿದೆ. ಗಲಭೆ ಸೃಷ್ಟಿಸಿ ಆಸ್ತಿ ಪಾಸ್ತಿ ನಷ್ಟ ಮಾಡಿರುವವರ ಕೈಯಿಂದಲೇ ನಷ್ಟದ ಹಣವನ್ನು ವಸೂಲಿ ಮಾಡಿಕೊಳ್ಳಲಾಗುವುದು ಎಂದರು.

ಈಗಾಗಲೇ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರುದ್ಧ ಜೆಡಿಎಸ್​​​ನವರು ಪ್ರತಿಭಟನೆ ಮಾಡುತ್ತಿರುವುದು ಸಮಂಜಸವಲ್ಲ. ರಾಜಕೀಯ ಕಾರಣಗಳಿಗೆ ಜೆಡಿಎಸ್ ಪಕ್ಷದವರು ಪ್ರತಿಭಟನೆ ಮಾಡುತ್ತಿದ್ದಾರೆಯೇ ಹೊರತು ಬೇರೆ ಯಾವುದಕ್ಕೂ ಅಲ್ಲ. ಮೊದಲು ಗ್ರಾಮೀಣ ಪ್ರದೇಶದಲ್ಲಿ ಭೂಮಿ ಕೊಳ್ಳಲು ಮಿತಿ ನಿಗದಿ ಮಾಡಲಾಗಿತ್ತು. ಆದರೆ ನಗರ ಪ್ರದೇಶದಲ್ಲಿ ಭೂಮಿ ಕೊಳ್ಳಲು ಮಿತಿಯಿರಲಿಲ್ಲ. ಆದ್ರೆ ಈಗ ನಗರ ಪ್ರದೇಶದಲ್ಲೂ ಭೂಮಿಯನ್ನು ಕೊಳ್ಳಲು ಮಿತಿ ಹೇರಲಾಗಿದೆ. ಇದರಿಂದ ನಗರ ಮತ್ತು ಗ್ರಾಮೀಣ ಪ್ರದೇಶದ ಜನರು ಸಮಾನವಾಗಿ ಭೂಮಿ ಖರೀದಿಸಬಹುದು. ಸುಗ್ರೀವಾಜ್ಞೆ ಸೂಕ್ತವಾಗಿದೆ ಮತ್ತು ನನ್ನ ಆತ್ಮಸಾಕ್ಷಿಗೆ ಸರಿಯಾಗಿದೆ ಎಂದು ಭಾವಿಸಿದ್ದೇನೆ ಎಂದು ಸಮರ್ಥನೆ ಮಾಡಿಕೊಂಡರು.

ಹಾಸನ ಮತ್ತು ಮೂಡಿಗೆರೆ ಭಾಗದಲ್ಲಿ ಮಳೆಯಾದರೆ ತುಮಕೂರು ಮತ್ತು ಬೆಂಗಳೂರಿನ ಭಾಗದವರು ಸಂತೃಪ್ತಿಯಾಗಿ ನೀರು ಕುಡಿಯಲು ಸಾಧ್ಯ. ಕಳೆದ ಮೂರು ವರ್ಷಗಳಿಂದಲೂ ಕೂಡ ನಿರಂತರವಾಗಿ ಸಮಯಕ್ಕೆ ಸರಿಯಾಗಿ ಮಳೆಯಾಗುತ್ತಿರುವುದರಿಂದ ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿಲ್ಲ ಎಂದರು.

ABOUT THE AUTHOR

...view details