ಹಾಸನ :ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವನ್ನ ವಿ ಸೋಮಣ್ಣಗೆ ಕೊಡಬೇಕು ಎಂದು ಈಗಾಗಲೇ ಸರ್ಕಾರಕ್ಕೆ ಒತ್ತಡ ಹೇರಲಾಗುತ್ತಿದೆ. ಇದಕ್ಕೆ ಪೂರಕವಾಗಿ ವಿ.ಸೋಮಣ್ಣ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕೋಡಿಮಠಕ್ಕೆ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಅರಸೀಕೆರೆಗೆ ಆಗಮಿಸಿದ್ದ ಸಚಿವ ಸೋಮಣ್ಣ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
ಹಾಸನ ರಾಜಕೀಯಕ್ಕೆ ಮರಳಬೇಕು ಅರಸೀಕೆರೆಯಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಕೊಂಡೊಯ್ಯಲು ಈಗ ಉತ್ತಮ ಅವಕಾಶವಿದೆ. ಪಕ್ಷ ಸಂಘಟನೆಗೆ ಕಾಲ ಕೂಡಿ ಬಂದಿದೆ. ಈಗಾಗಾಲೇ ನಗರಸಭೆ, ನಗರಾಭಿವೃದ್ದಿ ಪ್ರಾಧಿಕಾರ, ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಸ್ಥಾನ ಕೂಡ ಬಿಜೆಪಿ ಹಿಡಿತದಲ್ಲಿವೆ.
ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಶತಾಯಗತಾಯ ಅರಸೀಕೆರೆ ಸೇರಿ ಉಳಿದ ಎಲ್ಲ ತಾಲೂಕುಗಳಲ್ಲಿಯೂ ಬಿಜೆಪಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಕ್ಷೇತ್ರ ಗೆಲ್ಲಬೇಕು ಎಂಬ ಛಲದಿಂದ ಅರಸೀಕೆರೆ ಕ್ಷೇತ್ರದ ರಾಜಕಾರಣಕ್ಕೆ ದಾಪುಗಾಲಿಡಬೇಕು ಎಂದು ಸೋಮಣ್ಣ ಅವರ ಬೆಂಬಲಿಗರು ಆಗ್ರಹಿಸಿದ್ದಾರೆ.