ಕರ್ನಾಟಕ

karnataka

ETV Bharat / state

ಕೋಟ್ಯಂತರ ರೂಪಾಯಿ ಬೆಲೆಬಾಳುವ ಮರಗಳ ಮಾರಣಹೋಮ: ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾದ ತಹಶೀಲ್ದಾರ್ - Hassan Valuable Trees cut Case

ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿ ಬಳಿ ಮುನ್ನೂರಕ್ಕೂ ಹೆಚ್ಚು ಬೆಲೆಬಾಳುವ ಮರಗಳ ಮಾರಣಹೋಮ ನಡೆದಿದೆ.

Miscreants cut down hundreds of trees in Belur
Miscreants cut down hundreds of trees in Belur

By ETV Bharat Karnataka Team

Published : Dec 18, 2023, 3:02 PM IST

ಹಾಸನ:ಬೇಲೂರು‌ ತಾಲೂಕಿನ ಅರೇಹಳ್ಳಿ ಹೋಬಳಿಯ ನಂದಗೋಡನಹಳ್ಳಿ ಗ್ರಾಮದಲ್ಲಿ ಕೋಟ್ಯಂತರ ರೂಪಾಯಿ ಬೆಲೆಬಾಳುವ ಮರಗಳನ್ನು ಮಾರಣಹೋಮ ಮಾಡಿದ್ದು, ಸ್ಥಳಕ್ಕೆ ತಹಶೀಲ್ದಾರ್ ಮಮತಾ ಅವರು ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ.

ಪರಿಶೀಲನೆಯಲ್ಲಿ ತಹಶೀಲ್ದಾರ್ ಮಮತಾ

ಬೇಲೂರು ತಾಲೂಕಿನ ಅರೇಹಳ್ಳಿ‌ ಹೋಬಳಿಯ ನಂದಗೋಡನಹಳ್ಳಿ‌ ಗ್ರಾಮದ ಸರ್ವೆ ನಂಬರ್ 16ರ ಸರ್ಕಾರಿ ಭೂಮಿಯಲ್ಲಿ ಸುಮಾರು‌ ಮುನ್ನೂರಕ್ಕೂ ಹೆಚ್ಚು ಬೆಲೆ ಬಾಳುವ ಸಾಗವಾನಿ, ಹೊನ್ನೆ, ಬೀಟೆ, ಹಲಸು ಸೇರಿದಂತೆ ಇನ್ನಿತರ ಕಾಡು ಜಾತಿಯ ಮರಗಳನ್ನು ಕಡಿದು‌ ಮಾರಣಹೋಮ ಮಾಡಲಾಗಿದೆ. ರೆವಿನ್ಯೂ ಇನ್ಸ್‌ಪೆಕ್ಟರ್ ಹಾಗೂ ಗ್ರಾಮಲೆಕ್ಕಿಗ ಹಕ್ಕುಪತ್ರ ನೀಡಲಿ ಎಂದು ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ತಿಳಿದು ಬಂದಿದ್ದು, ತಕ್ಷಣ ತಹಶೀಲ್ದಾರ್ ಮಮತಾ ಅವರಿಗೆ ವಿಚಾರ ತಿಳಿಸಿದ್ದಾರೆ. ವಿಚಾರ ತಿಳಿದ ಕೂಡಲೇ ತಹಶಿಲ್ದಾರ್ ಮಮತಾ ಅವರು ತಮ್ಮ ಸಿಬ್ಬಂದಿ ಸಹಿತ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಪರಿಶೀಲನೆಯಲ್ಲಿ ತಹಶೀಲ್ದಾರ್ ಮಮತಾ

ಇಷ್ಟೆಲ್ಲ ದೊಡ್ಡ ಪ್ರಮಾಣದಲ್ಲಿ ಅರಣ್ಯ ನಾಶವಾಗುತ್ತಿದ್ದರೂ ಸಹ ಜವಾಬ್ದಾರಿಯುತ ಸ್ಥಾನದಲ್ಲಿರುವ ಹಾಗೂ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ತಮಗೆ ಏನೂ ಗೊತ್ತಿಲ್ಲದ ಹಾಗೇ ಕಣ್ಮುಚ್ಚಿ ಕುಳಿತಿರುವುದು ಸಾರ್ವಜನಿಕರಲ್ಲಿ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಸಾರ್ವಜನಿಕರು ಈ ವೇಳೆ ತಹಶೀಲ್ಧಾರ್​ಗೆ ದೂರು ನೀಡಿದರು.

ಪರಿಶೀಲನೆಯಲ್ಲಿ ತಹಶೀಲ್ದಾರ್ ಮಮತಾ

ಈ ಅರಣ್ಯ ಪ್ರದೇಶದಲ್ಲಿ ಹಲವು ದಿನಗಳಿಂದ ಅರಣ್ಯಕಳ್ಳರು ನಿತ್ಯ ಸಾಗವಾನಿ, ಹೊನ್ನೆ, ಬೀಟೆ ಸೇರಿದಂತೆ ಇನ್ನಿತರ ಬೆಲೆಬಾಳುವ ಮರಗಳನ್ನು ಕಡೆಯುತ್ತಿರುವುದು ಸಾಮಾನ್ಯವಾಗಿದೆ. ಕೆಲವು ಪ್ರಭಾವಿ ವ್ಯಕ್ತಿಗಳು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲಾಗಿ ಹಗಲಿನಲ್ಲಿಯೇ ಕಳ್ಳ ಸಾಗಣೆ ಮಾಡುತ್ತಿದ್ದಾರೆ ಎಂಬ ಅನುಮಾನ ಕಾಡುತ್ತಿದೆ. ಆದರೆ, ಈ ಅರಣ್ಯ ಇಲಾಖೆ ಅಧಿಕಾರಿಗಳಾಗಲೀ, ಸಿಬ್ಬಂದಿಗಳಾಗಲೀ ಈ ವಿಷಯ ಗೊತ್ತಿದ್ದೂ ಸುಮ್ಮನಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು, ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಗಮನಹರಿಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.

ಪರಿಶೀಲನೆಯಲ್ಲಿ ತಹಶೀಲ್ದಾರ್ ಮಮತಾ

ಬೆಲೆ ಬಾಳುವ ಸಾಗವಾನಿ, ಹೊನ್ನೆ, ಬೀಟೆ, ಹಲಸು ಸೇರಿದಂತೆ ಮುಂತಾದ ಜಾತಿಯ ಮರಗಳನ್ನು ಕಡಿದು ಹಾಕಲಾಗಿದೆ. ತಪ್ಪಿಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಕೂಡ ಸಾರ್ವಜನಿಕರಿಗೆ ಭರವಸೆ ನೀಡಿದರು.

ಇದನ್ನೂ ಓದಿ:ಶ್ರೀಗಂಧದ ಮರ ಕಳ್ಳತನಕ್ಕೆ ಯತ್ನ: ಆರೋಪಿಗಳ ಮೇಲೆ ಅರಣ್ಯ ಸಿಬ್ಬಂದಿಯಿಂದ ಗುಂಡಿನ ದಾಳಿ, ಒಬ್ಬನ ಸಾವು

ಗುಂಡಿನ ದಾಳಿ: ಶ್ರೀಗಂಧದ ಮರ ಕಡಿಯುತ್ತಿದ್ದ ಸಂದರ್ಭದಲ್ಲಿ ತಡೆಯಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದು, ಮುನಿರಾಜು (38) ಎಂಬಾತ ಮೃತಪಟ್ಟು, ಮತ್ತೋರ್ವ ಸ್ಥಳದಿಂದ ಪರಾರಿಯಾಗಿದ್ದ ಘಟನೆ ಇತ್ತೀಚೆಗೆ ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಕಲ್ಕೆರೆ ಅರಣ್ಯ ವಲಯದಲ್ಲಿ ನಡೆದಿತ್ತು.

ABOUT THE AUTHOR

...view details