ಚನ್ನರಾಯಪಟ್ಟಣ (ಹಾಸನ):ಕೊರೊನಾ ಮಹಾಮಾರಿ ಸಂದರ್ಭದಲ್ಲಿ ಯಾವುದೇ ರೀತಿಯ ಸಹಾಯ ಮಾಡಲು ಸಿದ್ಧವೆಂದು ಭರವಸೆ ನೀಡಿದ್ದ ಶಾಸಕ ಸಿ.ಎನ್ ಬಾಲಕೃಷ್ಣ ಅವರು ಇದೀಗ ಜನರ ಸಹಾಯಕ್ಕೆ ಧಾವಿಸಿದ್ದಾರೆ.
ಕ್ವಾರಂಟೈನ್ ಕೇಂದ್ರಕ್ಕೆ ಅಗತ್ಯ ವಸ್ತುಗಳ ಸೌಲಭ್ಯ ಕಲ್ಪಿಸಿದ ಶಾಸಕ ಸಿ.ಎನ್. ಬಾಲಕೃಷ್ಣ - ಶಾಸಕ ಸಿ.ಎನ್ ಬಾಲಕೃಷ್ಣ
ಚನ್ನರಾಯಪಟ್ಟಣದ ಕ್ವಾರಂಟೈನ್ ಕೇಂದ್ರಕ್ಕೆ ಕೆಲ ಅವಶ್ಯಕ ವಸ್ತುಗಳ ಅಗತ್ಯತೆ ಇದೆ ಎಂದು ತಿಳಿದ ಶಾಸಕ ಸಿ.ಎನ್. ಬಾಲಕೃಷ್ಣ ಅವರು, ಗೀಸರ್ ಹಾಗೂ ವಾಷಿಂಗ್ ಮಷಿನ್ ಸೌಲಭ್ಯವನ್ನು ಕಲ್ಪಿಸಿದ್ದಾರೆ.
ಅಗತ್ಯ ಸೌಲಭ್ಯ ಕಲ್ಪಿಸಿದ ಶಾಸಕ ಸಿ.ಎನ್ ಬಾಲಕೃಷ್ಣ
ಕ್ವಾರಂಟೈನ್ ಕೇಂದ್ರದಲ್ಲಿ ಬಿಸಿ ನೀರು ಮತ್ತು ವಿದ್ಯುತ್ ಸಮಸ್ಯೆಯಿದೆ ಎಂದು ಶಾಸಕರಿಗೆ ಕೆಲ ಸಿಬ್ಬಂದಿ ವಿಷಯ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿ ಸಮಸ್ಯೆಗಳನ್ನು ಪರಿಶೀಲಿಸಿದ ಅವರು, ತಕ್ಷಣವೇ ಗೀಸರ್ ಹಾಗೂ ವಾಷಿಂಗ್ ಮಷಿನ್ ಸೌಲಭ್ಯವನ್ನು ಕಲ್ಪಿಸಿದ್ದಾರೆ.
ಯಾವುದೇ ರೀತಿಯ ಸಹಾಯ ಬೇಕಾದರೂ ಕೇಳಿ. ಭಯಪಡುವ ಅವಶ್ಯಕತೆಯಿಲ್ಲ ಎಂದು ಧೈರ್ಯ ತುಂಬಿದ್ದಾರೆ.