ಕರ್ನಾಟಕ

karnataka

ETV Bharat / state

ಆರೋಗ್ಯ ಕೇಂದ್ರಕ್ಕೆ ಶಾಸಕ ಲಿಂಗೇಶ್ ದಿಢೀರ್​​​ ಭೇಟಿ: ಕಾಮಗಾರಿ ಪರಿಶೀಲನೆ - ಮೇಲ್ಚಾವಣಿಗಾಗಿ ರೂ5ಲಕ್ಷ ಬಿಡುಗಡೆ

ಜಾವಗಲ್ ಪಟ್ಟಣದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಶಾಸಕ ಕೆ.ಎಸ್.ಲಿಂಗೇಶ್ ದಿಢೀರ್ ಭೇಟಿ ನೀಡಿ, ಆಸ್ಪತ್ರೆ ಮೇಲ್ಭಾಗದಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲನೆ ನಡೆಸಿದರು.

ಕಾಮಗಾರಿ ಪರಿಶೀಲನೆ

By

Published : Nov 4, 2019, 8:23 AM IST

ಹಾಸನ:ಜಾವಗಲ್ ಪಟ್ಟಣದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಶಾಸಕ ಕೆ.ಎಸ್.ಲಿಂಗೇಶ್ ದಿಢೀರ್ ಭೇಟಿ ನೀಡಿ ಆಸ್ಪತ್ರೆ ಮೇಲ್ಭಾಗದಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲನೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಮೇಲ್ಛಾವಣಿಗಾಗಿ 5 ಲಕ್ಷ ಬಿಡುಗಡೆ ಮಾಡಲಾಗಿದ್ದು, ಸದ್ಯದಲ್ಲೇ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುವುದು ಎಂದರು.

ಆರೋಗ್ಯ ಕೇಂದ್ರಕ್ಕೆ ಕೆ.ಎಸ್.ಲಿಂಗೇಶ್ ದಿಢೀರ್ ಭೇಟಿ

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ತಿಮ್ಮೇಗೌಡ ಮಾತನಾಡಿ, ನಾಡ ಕಚೇರಿ ಕಟ್ಟಡವು ತುಂಬಾ ಹಾಳಾಗಿದೆ. ಸುಮಾರು 75 ಲಕ್ಷ ರೂ. ವೆಚ್ಚದಲ್ಲಿ ದೊಡ್ಡ ಕೆರೆ ಸಮೀಪವಿರುವ ಯಾತ್ರಿ ನಿವಾಸವು ಸಾರ್ವಜನಿಕರ ಉಪಯೋಗಕ್ಕೆ ಬಾರದೆ ಪಾಳು ಬೀಳುತ್ತಿದೆ. ಅದರ ನಿರ್ವಹಣೆಯನ್ನು ಸರಿಯಾಗಿ ಮಾಡುತ್ತಿಲ್ಲ. ಗಾಜುಗಳು ಹಾಗೂ ಬಾಗಿಲುಗಳು ಒಡೆದು ಹೋಗಿವೆ. ಆದ್ದರಿಂದ ಅಲ್ಲಿಗೆ ನಾಡ ಕಚೇರಿಯನ್ನು ಸ್ಥಳಾಂತರಿಸಬೇಕು ಎಂದು ಮನವಿ ಮಾಡಿದರು.

ABOUT THE AUTHOR

...view details